ಕೆಮ್ಮಾರ: ಸೆ.12ರಂದು ಪ್ರತಿಭಾ ಕಾರಂಜಿ

Update: 2019-09-10 06:30 GMT

ಉಪ್ಪಿನಂಗಡಿ, ಸೆ.10: ದ.ಕ. ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಉಪ್ಪಿನಂಗಡಿ ಹಾಗೂ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇವರ ಜಂಟಿ ಆಶ್ರಯದಲ್ಲಿ ಉಪ್ಪಿನಂಗಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಸಡಗರ- 2019’ ಕೆಮ್ಮಾರದ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.12ರಂದು ನಡೆಯಲಿದೆ.

ಬೆಳಗ್ಗೆ 9:30ಕ್ಕೆ ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಹಿರೇಬಂಡಾಡಿ ಗ್ರಾಪಂ ಅಧ್ಯಕ್ಷ ಹಮ್ಮಬ್ಬ ಶೌಕತ್ ಅಲಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸದಸ್ಯೆ ಶಯನಾ ಜಯಾನಂದ, ತಾಪಂ ಸದಸ್ಯ ಮುಕುಂದ ಗೌಡ ಬಜತ್ತೂರು, ಹಿರೇಬಂಡಾಡಿ ಗ್ರಾಪಂ ಉಪಾಧ್ಯಕ್ಷೆ ಉಷಾ ಲಕ್ಷ್ಮೀಶ, ಕೊಯ್ಲ ಗ್ರಾಪಂ ಅಧ್ಯಕ್ಷೆ ಹೇಮಾವತಿ ಮೋಹನ್‌ದಾಸ್, ಹಿರೇಬಂಡಾಡಿ ಗ್ರಾಪಂ ಸದಸ್ಯರಾದ ಮಾಲತಿ ಹರಿನಾರಾಯಣ್, ಮುದ್ದ ಎಚ್., ಮಂಜುಳಾ, ಕೊಯ್ಲ ಗ್ರಾಪಂ ಸದಸ್ಯರಾದ ಸುಲೈಮಾನ್, ಸುಜಾತಾ, ಲಲಿತಾ, ಉಪ್ಪಿನಂಗಡಿ ಸಿಆರ್‌ಪಿ ಮುಹಮ್ಮದ್ ಅಶ್ರಫ್, ಕೆಮ್ಮಾರ ಶಾಲಾ ಮುಖ್ಯಗುರು ಜಯಶ್ರೀ ಎಂ., ಎಸ್‌ಡಿಎಂಸಿ ಅಧ್ಯಕ್ಷ ಸೆಲಿಕತ್ ರಹ್ಮಾನ್ ಖಾನ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್‌ದಾಸ್ ಶೆಟ್ಟಿ, ಪ್ರತಿಭಾ ಕಾರಂಜಿ ಸ್ವಾಗತ ಸಮಿತಿಯ ಅಧ್ಯಕ್ಷ ಉಮರ್ ಕೆಮ್ಮಾರ, ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಅಝೀಝ್ ಬಿ.ಕೆ. ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News