ಕಾನೂನು ಉಲ್ಲಂಘಿಸಿದರೆ ಪ್ರಕರಣ ದಾಖಲು: ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ

Update: 2019-09-10 14:41 GMT

ಬೆಂಗಳೂರು, ಸೆ.10: ಜಾರಿ ನಿದೇರ್ಶನಾಲಯ(ಈಡಿ) ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ನ್ನು ಬಂಧಿಸಿರುವುದನ್ನು ವಿರೋಧಿಸಿ ನಗರದಲ್ಲಿ ನಡೆಯುತ್ತಿರುವ ಪ್ರತಿಭಟನಾ ರ‍್ಯಾಲಿಯಲ್ಲಿ ಕಾನೂನು ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ. 

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ನ್ಯಾಷನಲ್ ಕಾಲೇಜು ಮೈದಾನದಿಂದ ಸ್ವಾತಂತ್ರ ಉದ್ಯಾನವನದವರೆಗೆ ನಡೆಯುವ ಪ್ರತಿಭಟನಾ ರ‍್ಯಾಲಿಯಲ್ಲಿ ಯಾರೇ ಕಾನೂನು ಉಲ್ಲಂಘಿಸಿದರೂ ಪ್ರಥಮವಾಗಿ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು.

ಷರತ್ತುಗಳು: ಪ್ರತಿಭಟನೆಯನ್ನು ನಿಗದಿತ ಅವಧಿಯಲ್ಲಿ ಪ್ರಾರಂಭಿಸಿ, ನಿಗದಿತ ವೇಳೆಗೆ ಮುಕ್ತಾಯ ಮಾಡಬೇಕು. ಪ್ರತಿಭಟನಾ ರ‍್ಯಾಲಿ ನಿಗದಿ ಪಡಿಸಿ ರಸ್ತೆಯಲ್ಲಿಯೇ ಸಾಗಬೇಕು. ಸಾರ್ವಜನಿರಿಕರಿಗೆ ಹಾಗೂ ವಾಹನಗಳಿಗೆ ಅಡಚಣೆ ಮಾಡುವಂತಿಲ್ಲ. ರ‍್ಯಾಲಿಯಲ್ಲಿ ಯಾವುದೇ ಪ್ರಚೋದನಾಕಾರಿ ಹೇಳಿಕೆ, ಘೋಷಣೆ ಕೂಗುವಂತಿಲ್ಲವೆಂದು ಅವರು ತಿಳಿಸಿದ್ದಾರೆ.

ಪ್ರತಿಭಟನಾ ರ‍್ಯಾಲಿಯಲ್ಲಿ ಧ್ವನಿ ವರ್ಧಕಗಳನ್ನು ಬಳಸವಂತಿಲ್ಲ, ಬಲವಂತದ ಬಂದ್ ಮಾಡಿಸುವಂತಿಲ್ಲ, ವಾಹನಗಳನ್ನು ಅಡ್ಡಹಾಕುವಂತಿಲ್ಲ. ಯಾವುದೇ ಸಂದರ್ಭದಲ್ಲೂ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡುವಂತಿಲ್ಲ. ಗಲಭೆಗೆ ಪ್ರಚೋದನೆ ನೀಡುವಂತಿಲ್ಲ. ರ‍್ಯಾಲಿಯಲ್ಲಿ ದೊಣ್ಣೆ ಸೇರಿದಂತೆ ಹರಿತವಾದ ಆಯುಧಗಳನ್ನು ಬಳಸುವಂತಿಲ್ಲವೆಂದು ಅವರು ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News