ಕಾನೂನಾತ್ಮಕ, ರಾಜಕೀಯವಾಗಿ ನಾನು ಗೆಲುವು ಸಾಧಿಸುತ್ತೇನೆ: ಡಿಕೆಶಿ
Update: 2019-09-10 20:15 IST
ಬೆಂಗಳೂರು, ಸೆ.10: ನನ್ನನ್ನು ಬೆಂಬಲಿಸಲು ನಾಳೆ(ಸೆ.11) ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಿರುವ ನಮ್ಮ ನಾಯಕರು, ಬೆಂಬಲಿಗರು, ಹಿತೈಷಿಗಳು ಹಾಗೂ ಸ್ನೇಹಿತರಿಗೆ ಹೃತ್ಪೂರ್ವಕವಾದ ಧನ್ಯವಾದಗಳು. ಪ್ರತಿಭಟನೆ ಶಾಂತಿಯುತವಾಗಿರಲಿ, ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಿರಲಿ, ಅಲ್ಲದೇ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾಗದಿರಲಿ ಎಂಬುದು ನನ್ನ ಕಳಕಳಿಯ ಮನವಿ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ.
ನಾನು ಯಾವುದೇ ತಪ್ಪು ಮಾಡಿಲ್ಲ ಹಾಗೂ ನನ್ನನ್ನು ರಾಜಕೀಯ ಕಾರಣಕ್ಕಾಗಿ ಗುರಿ ಮಾಡಲಾಗಿದೆ. ನಿಮ್ಮೆಲ್ಲರ ಸಹಕಾರ ಹಾಗೂ ಹಾರೈಕೆಗಳು ಮತ್ತು ದೇವರು ಹಾಗೂ ನ್ಯಾಯಾಂಗದ ಮೇಲೆ ನನಗೆ ನಂಬಿಕೆ ಇದೆ. ಕಾನೂನಾತ್ಮಕ ಹಾಗೂ ರಾಜಕೀಯವಾಗಿ ಇದರಲ್ಲಿ ನಾನು ಗೆಲುವು ಸಾಧಿಸುತ್ತೇನೆ ಎಂದು ಶಿವಕುಮಾರ್ ತಿಳಿಸಿದ್ದಾರೆ.