ಹಾಂಕಾಂಗ್ ವ್ಯವಹಾರದಲ್ಲಿ ಹಸ್ತಕ್ಷೇಪ ಬೇಡ: ಅಮೆರಿಕಕ್ಕೆ ಎಚ್ಚರಿಕೆ ನೀಡಿದ ಮುಖ್ಯ ಕಾರ್ಯನಿರ್ವಹಣಾಧಿಕಾರಿ

Update: 2019-09-10 14:54 GMT

ಹಾಂಕಾಂಗ್, ಸೆ. 10: ಹಾಂಕಾಂಗ್‌ನಲ್ಲಿ ನಡೆಯುತ್ತಿರುವ ಪ್ರಜಾಪ್ರಭುತ್ವ ಪರ ಚಳವಳಿಗೆ ನನ್ನ ಸರಕಾರ ನೀಡುತ್ತಿರುವ ಪ್ರತಿಕ್ರಿಯೆಯಲ್ಲಿ ಹಸ್ತಕ್ಷೇಪ ನಡೆಸಬಾರದು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕ್ಯಾರೀ ಲ್ಯಾಮ್ ಮಂಗಳವಾರ ಅಮೆರಿಕಕ್ಕೆ ಎಚ್ಚರಿಕೆ ನೀಡಿದ್ದಾರೆ.

 ಹೊಸದಾಗಿ ನಡೆದ ಪ್ರತಿಭಟನೆಗಳ ವೇಳೆ, ಚೀನಾ ಮೇಲೆ ಒತ್ತಡ ಹೇರುವಂತೆ ಪ್ರತಿಭಟನಕಾರರು ಅಮೆರಿಕಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಅವರು ಈ ಎಚ್ಚರಿಕೆಯನ್ನು ಹೊರಡಿಸಿದ್ದಾರೆ.

ಬ್ರಿಟನ್ ವಶದಲ್ಲಿದ್ದ ಹಾಂಕಾಂಗ್ 1997ರಲ್ಲಿ ಚೀನಾಕ್ಕೆ ಹಸ್ತಾಂತರಗೊಂಡ ಬಳಿಕ, ಕಳೆದ 14 ವಾರಗಳಲ್ಲಿ ಹಾಂಕಾಂಗ್‌ನಲ್ಲಿ ಅತಿ ದೊಡ್ಡ ಪ್ರತಿಭಟನೆಗಳು ನಡೆದಿವೆ.

ಪ್ರತಿಭಟನಕಾರರು ರವಿವಾರ ಮತ್ತೆ ಬೀದಿಗಿಳಿದಿದ್ದು, ಅಮೆರಿಕ ಕೌನ್ಸುಲೇಟ್ ಕಚೇರಿಯ ಮುಂದೆ ಜಮಾಯಿಸಿದರು. ಹಾಂಕಾಂಗ್‌ನಲ್ಲಿ ನಡೆಯುತ್ತಿರುವ ಪ್ರಜಾಪ್ರಭುತ್ವ ಪರ ಚಳವಳಿಗೆ ಬೆಂಬಲವನ್ನು ವ್ಯಕ್ತಪಡಿಸಿ ಅಮೆರಿಕದ ಸಂಸತ್ತು ಕಾಂಗ್ರೆಸ್ ಮಸೂದೆಯೊಂದನ್ನು ಅಂಗೀಕರಿಸಬೇಕು ಎಂದು ಈ ಸಂದರ್ಭದಲ್ಲಿ ಪ್ರತಿಭಟನಕಾರರು ಅಮೆರಿಕವನ್ನು ಒತ್ತಾಯಿಸಿದ್ದಾರೆ.

‘‘ಹಾಂಕಾಂಗ್‌ನ ಆಂತರಿಕ ವ್ಯವಹಾರಗಳಲ್ಲಿ ಯಾವುದೇ ದೇಶ ಮಧ್ಯಪ್ರವೇಶಿಸುವುದು ಅತ್ಯಂತ ಅನುಚಿತವಾಗಿದೆ’’ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಕ್ಯಾರೀ ಲ್ಯಾಮ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News