ಕೆರೆಯಲ್ಲಿ ಮುಳುಗಿ 6 ಮಕ್ಕಳು ಸಾವು ಪ್ರಕರಣ: ತಲಾ ಎರಡು ಲಕ್ಷ ರೂ. ಪರಿಹಾರ

Update: 2019-09-10 16:33 GMT

ಬೆಂಗಳೂರು, ಸೆ.10: ಕೋಲಾರ ಜಿಲ್ಲೆಯ ಕೆ.ಜಿ.ಎಫ್ ನ ಕ್ಯಾಸಂಬಳ್ಳಿ ಹೋಬಳಿಯ ಮರಡಘಟ್ಟ ಗ್ರಾಮದ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಆರು ಮಕ್ಕಳ ಕುಟುಂಬದವರಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.

ಮಕ್ಕಳು ಗಣಪತಿ ಮೂರ್ತಿಯನ್ನು ಕೆರೆಯಲ್ಲಿ ವಿಸರ್ಜಿಸುವ ರೀತಿ ಆಟವಾಡುತ್ತಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಈ ಘಟನೆ ಅತ್ಯಂತ ದುರದೃಷ್ಟಕರ ಎಂದಿರುವ ಮುಖ್ಯಮಂತ್ರಿಗಳು ಕೂಡಲೇ ಮಕ್ಕಳ ಕುಟುಂಬದವರಿಗೆ ಪರಿಹಾರ ನೀಡುವಂತೆ ಕೋಲಾರ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News