ಡಿಕೆಶಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಸೆ.16ಕ್ಕೆ ಮುಂದೂಡಿಕೆ

Update: 2019-09-11 14:41 GMT

ಬೆಂಗಳೂರು, ಸೆ.9: ಜಾರಿ ನಿರ್ದೇಶನಾಲಯ(ಈಡಿ) ಜಾರಿಗೊಳಿಸಿದ್ದ ಸಮನ್ಸ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.16ಕ್ಕೆ ಮುಂದೂಡಿದೆ. 

ಈ ಕುರಿತು ಡಿಕೆಶಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ನ್ಯಾಯಪೀಠವು ಹೊಸದಿಲ್ಲಿಯ ನಿವಾಸಗಳ ಮೇಲಿನ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆಯೇ ಇತರೆ ಅರ್ಜಿಗಳು ಸೆ.16ರಂದು ವಿಚಾರಣೆಗೆ ನಿಗದಿಯಾಗಿವೆ. ಅಂದೇ ಡಿಕೆಶಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನಡೆಸಲಾವುದು ಎಂದು ತಿಳಿಸಿ, ವಿಚಾರಣೆಯನ್ನು ಸೆ.16ಕ್ಕೆ ಮುಂದೂಡಿತು. 

ಆದಾಯ ತೆರಿಗೆ ಇಲಾಖೆ, ಈ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ(ಸಿಆರ್‌ಪಿಸಿ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ. ಇದರನ್ವಯ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಸಿಐಆರ್(ಪೊಲೀಸ್ ಎಫ್‌ಐಆರ್‌ಗೆ ಸಮಾನವಾದ-ಜಾರಿ ಪ್ರಕರಣ ಮಾಹಿತಿ ವರದಿ) ದಾಖಲಿಸಿದ್ದಾರೆ. ಹೀಗಾಗಿ, ಈ ಹಂತದಲ್ಲಿ ಆರೋಪಿಗಳ ಅರ್ಜಿಗಳು ವಿಚಾರಣೆಗೆ ಅರ್ಹವಾಗಿಲ್ಲ ಎಂದು ಏಸದಸ್ಯ ಪೀಠ ತೀರ್ಪಿನಲ್ಲಿ ತಿಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News