ಪಚ್ಚನಾಡಿ, ಮಂದಾರ ಪ್ರದೇಶಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

Update: 2019-09-11 15:30 GMT

ಮಂಗಳೂರು, ಸೆ.11: ಪಚ್ಚನಾಡಿ ಡಂಪಿಂಗ್ ಯಾರ್ಡ್ ಪ್ರದೇಶದಲ್ಲಿ ಉಂಟಾದ ಅನಾಹುತ ಸಂಭವಿಸಿದ ಪಚ್ಚನಾಡಿ ಮತ್ತು ಮಂದಾರ ಪ್ರದೇಶಗಳಿಗೆ ಬುಧವಾರ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಭೇಟಿ ನೀಡಿದರು.

ಮೊದಲು ಪಚ್ಚನಾಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಬಳಿಕ ಮಂದಾರಕ್ಕೆ ಭೇಟಿ ನೀಡಿದರು. ನಂತರ ಮಂದಾರ ಸಂತ್ರಸ್ತರಿಗೆ ತಾತ್ಕಾಲಿಕ ಆಶ್ರಯ ನೀಡಿರುವ ಕುಲಶೇಖರ ಹೌಸಿಂಗ್ ಬೋರ್ಡ್‌ಗೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದರು. ಸಂತ್ರಸ್ತರಿಗೆ ಜಿಲ್ಲಾಡಳಿತ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿ, ಇಲ್ಲಿನ ಸಮಸ್ಯೆ ಬಗ್ಗೆ ಎರಡು ರೀತಿಯ ಯೋಜನೆ ಮಾಡಬೇಕು. ಪಚ್ಚನಾಡಿಯಲ್ಲಿ ಹಾಲಿ ಇರುವ ತ್ಯಾಜ್ಯವನ್ನು ವಿಲೇವಾರಿ ಮಾಡುವ ಬಗ್ಗೆ ವಿಸ್ತೃತ ಯೋಜನೆ ರೂಪಿಸಬೇಕು. ಮಂದಾರ ಸಂತ್ರಸ್ತರಿಗೆ ಪುನರ್ವಸತಿ ಸೇರಿದಂತೆ ಅಗತ್ಯ ಪರಿಹಾರ ಒದಗಿಸುವ ಬಗ್ಗೆ ಸಮಗ್ರ ವರದಿ ಸಲ್ಲಿಸಬೇಕು. ಬಳಿಕ ಈ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಸ್ತಾವ ಕಳುಹಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭ ಮಹಾನಗರಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್, ಜಂಟಿ ಆಯುಕ್ತೆ ಗಾಯತ್ರಿ ನಾಯಕ್, ಪರಿಸರ ಅಭಿಯಂತರ ಮಧು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News