ಸೆ.12: ಮಂಗಳೂರು ವಿವಿ 40ನೇ ಸಂಸ್ಥಾಪನಾ ದಿನ
Update: 2019-09-11 21:03 IST
ಮಂಗಳೂರು, ಸೆ.11: ಮಂಗಳೂರು ವಿಶ್ವವಿದ್ಯಾನಿಲಯದ 40ನೇ ಸಂಸ್ಥಾಪನಾ ದಿನಾಚರಣೆಯು ಸೆ.12ರಂದು ಬೆಳಗ್ಗೆ 10 ಗಂಟೆಗೆ ಮಂಗಳ ಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.
ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲಾಧಿಪತಿ ಪ್ರೊ.ಎನ್.ಆರ್. ಶೆಟ್ಟಿ ಸಂಸ್ಥಾಪಾನಾ ದಿನಾಚರಣೆ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಸಾಧಕರನ್ನು ಸನ್ಮಾನಿಸಲಾಗುವ್ಯದು ಎಂದು ಪ್ರಕಟನೆ ತಿಳಿಸಿದೆ.