‘ಬ್ಯಾಂಕ್ ನಿವೃತ್ತ ನೌಕರರ ಪಿಂಚಣಿ ಪರಿಷ್ಕರಣೆಯಾಗಲಿ’

Update: 2019-09-11 15:56 GMT

ಉಡುಪಿ, ಸೆ.11: ಉಡುಪಿ ಜಿಲ್ಲಾ ಬ್ಯಾಂಕ್ ನಿವೃತ್ತ ನೌಕರರ ಸಂಘದ ಸಭೆಯು ಮಂಗಳವಾರ ನಗರದ ಹೊಟೇಲ್ ಕಿದಿಯೂರು ಸಭಾಂಗಣದಲ್ಲಿ ನಡೆಯಿತು

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಖಿಲ ಭಾರತ ಬ್ಯಾಂಕ್ ನಿವೃತ್ತರ ಒಕ್ಕೂಟದ ಉಪ ಪ್ರಧಾನ ಕಾರ್ಯದರ್ಶಿ ಕೆ.ವಿಶ್ವನಾಥ ನಾಯ್ಕಾ ಅವರು ಮಾತನಾಡಿ, ಕಾಲಕಾಲಕ್ಕೆ ಪಿಂಚಣಿ ಪರಿಷ್ಕರಣೆ, ಕುಟುಂಬ ಪಿಂಚಣಿಯಲ್ಲಿ ಹೆಚ್ಚಳ, ಆರೋಗ್ಯ ವಿಮೆ ಸೌಲಭ್ಯ ಇಂದಿನ ತುರ್ತು ಅಗತ್ಯವಾಗಿದೆ. ಇದಕ್ಕಾಗಿ ರಾಷ್ಟ್ರ ಮಟ್ಟದಲ್ಲಿ ಹೋರಾಟ ಸಿದ್ಧರಿರುವಂತೆ ಅವರು ಸಂಘದ ಸದಸ್ಯರಿಗೆ ಕರೆ ನೀಡಿದರು.

ಸಿಂಡಿಕೇಟ್ ಬ್ಯಾಂಕ್ ನಿವೃತ್ತರ ಸಂಘದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್, ಕಾರ್ಪೋರೇಷನ್ ಬ್ಯಾಂಕ್‌ನ ರಾಮಪ್ರಿಯ, ವಿಜಯ ಬ್ಯಾಂಕ್ ನಿವೃತ್ತರ ಸಂಘದ ಅಧ್ಯಕ್ಷ ಕೆ.ಸುಧಾಕರ ಶೆಟ್ಟಿ ಮಾತನಾಡಿದರು.

ಸಭೆಯಲ್ಲಿ ಸಿಂಡಿಕೇಟ್ ಬ್ಯಾಂಕ್ ನಿವೃತ್ತರ ಸಂಘದ ಎಂ.ಎಸ್.ಭಟ್, ಕಾರ್ಪೋರೇಷನ್ ಬ್ಯಾಂಕಿನ ಕೆ.ವಿ.ಶೆಣೈ, ವಿಜಯಬ್ಯಾಂಕಿನ ಮಲ್ಲಿಕಾರ್ಜುನ ಮದಿನೂರು ಉಪಸ್ಥಿತರಿದ್ದರು.

ಜಿಲ್ಲಾ ಸಂಘದ ಅಧ್ಯಕ್ಷ ಪಿ.ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಘದ ಕಾರ್ಯದರ್ಶಿ ಯು.ಶಿವರಾಯ ಪ್ರಾಸ್ತಾವಿಕ ಮಾತುಗಳನ್ನಾಡಿ ದರು. ವಿಜಯ ಬ್ಯಾಂಕಿನ ಗಿರಿಧರ ಶೆಟ್ಟಿ ಸ್ವಾಗತಿಸಿದರು. ವಿಜಯ ಬ್ಯಾಂಕಿನ ಅನಿಲ್‌ಕುಮಾರ್ ಶೆಟ್ಟಿ ವಂದಿಸಿ, ಸಿ.ಸುಧಾಕರ ನಂಬಿಯಾರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News