ಉಡುಪಿ ಜಿಲ್ಲಾಮಟ್ಟದ ಪಿಯು ಬಾಸ್ಕೆಟ್‌ಬಾಲ್ ಪಂದ್ಯಾಟ: ಜ್ಞಾನಸುಧಾ -ಎಂಜಿಎಂ ಕಾಲೇಜು ತಂಡಗಳಿಗೆ ಪ್ರಶಸ್ತಿ

Update: 2019-09-11 16:01 GMT

ಉಡುಪಿ, ಸೆ.11: ಉಡುಪಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಉಡುಪಿ ಎಂಜಿಎಂ ಕಾಲೇಜಿನ ಸಹಯೋಗದೊಂದಿಗೆ ಬುಧವಾರ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ ಅಂತರ್ ಪದವಿ ಪೂರ್ವ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾಟದ ಬಾಲಕರ ವಿಭಾಗದಲ್ಲಿ ಕಾರ್ಕಳ ಗಣಿತ ನಗರದ ಜ್ಞಾನಸುಧಾ ಹಾಗೂ ಬಾಲಕಿಯರ ವಿಭಾಗದಲ್ಲಿ ಉಡುಪಿ ಎಂಜಿಎಂ ಕಾಲೇಜು ತಂಡ ಪ್ರಶಸ್ತಿ ಗೆದ್ದುಕೊಂಡಿದೆ.

ಬಾಲಕರ ವಿಭಾಗದ ಅಂತಿಮ ಸುತ್ತಿನ ಪಂದ್ಯಾಟದಲ್ಲಿ ಜ್ಞಾನಸುಧಾ ತಂಡ ಎದುರಾಳಿ ಎಂಜಿಎಂ ಕಾಲೇಜು ತಂಡವನ್ನು 25-19 ಅಂಕ ಗಳೊಂದಿಗೆ ಹಾಗೂ ಬಾಲಕಿಯರ ವಿಭಾಗದಲ್ಲಿ ಎಂಜಿಎಂ ತಂಡ ಎದುರಾಳಿ ಜ್ಞಾನಸುಧಾ ತಂಡವನ್ನು 4-0 ಅಂಕದೊಂದಿಗೆ ಸೋಲಿಸಿ ಜಯ ಸಾಧಿಸಿದೆ. ಉತ್ತಮ ಆಟ ಗಾರ ವೈಯಕ್ತಿಕ ಪ್ರಶಸ್ತಿಯನ್ನು ಬಾಲಕರ ವಿಭಾಗದಲ್ಲಿ ಜ್ಞಾನಸುಧಾ ತಂಡದ ಪ್ರಜ್ವಲ್ ಹಾಗೂ ಬಾಲಕಿಯರ ವಿಭಾಗದಲ್ಲಿ ಜ್ಞಾನಸುಧಾ ತಂಡದ ಕುಂಜಲಾ ಪಡೆದುಕೊಂಡರು.

ಕಾಲೇಜಿನ ಸಭಾಂಗಣದಲ್ಲಿ ಸಂಜೆ ನಡೆದ ಸಮಾರೋಪದಲ್ಲಿ ಸಿಂಡಿಕೇಟ್ ಬ್ಯಾಂಕ್ ಕುಂಜಿಬೆಟ್ಟು ಶಾಖೆಯ ಶಾಖಾ ಪ್ರಬಂಧಕ ಸಚಿನ್ ಶೆಟ್ಟಿ ವಿಜೇತರಿಗೆ ಬಹುಮಾನ ವಿತರಿಸಿದರು. ಕಾಲೇಜಿನ ಪ್ರಾಂಶುಪಾಲ ಎಂ.ಜಿ.ವಿಜಯ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿದೇವಿ ಎ., ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ ಕುಮಾರ್ ಹೆಗ್ಡೆ, ಜಿಲ್ಲಾ ಬಾಸ್ಕೆಟ್‌ಬಾಲ್ ಅಸೋಸಿ ಯೇಶನ್ ಅಧ್ಯಕ್ಷ ರಾಮದಾಸ್ ಕಾಮತ್ ಉಪಸ್ಥಿತರಿದ್ದರು.

ಉಪನ್ಯಾಸಕ ಮುರಳೀಧರ್ ಭಟ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಪಂದ್ಯಾಟದ ಎರಡು ವಿಭಾಗಗಳಲ್ಲಿ ಜಿಲ್ಲೆಯ ಒಟ್ಟು 15 ಕಾಲೇಜು ತಂಡ ಗಳು ಭಾಗವಹಿಸಿದ್ದವು.

ಪಂದ್ಯಾಟದ ಉದ್ಘಾಟನೆ: ಪಂದ್ಯಾಟವನ್ನು ಬ್ಯಾಂಕ್ ಆಫ್ ಬರೋಡಾ ಉಡುಪಿ ಪ್ರಾದೇಶಿಕ ಕಚೇರಿಯ ಉಪಮಹಾ ಪ್ರಬಂಧಕ ರವೀಂದ್ರ ರೈ ಉದ್ಘಾಟಿಸಿ, ಶುಭಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಜಿ.ವಿಜಯ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿದೇವಿ ಎ., ಜಿಲ್ಲಾ ಬಾಸ್ಕೆಟ್‌ಬಾಲ್ ಅಸೋಸಿ ಯೇಶನ್ ಅಧ್ಯಕ್ಷ ರಾಮದಾಸ್ ಕಾಮತ್ ಉಪಸ್ಥಿತರಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ ಕುಮಾರ್ ಹೆಗ್ಡೆ ಸ್ವಾಗತಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಸುರೇಂದ್ರನಾಥ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News