ಒಕ್ಕಲಿಗ ಸಮುದಾಯಕ್ಕೆ ಯಾರು ಆದರ್ಶ ಆಗಬೇಕೆಂಬುದನ್ನು ಅವರೇ ತೀರ್ಮಾನಿಸಲಿ: ಸಚಿವ ಸಿ.ಟಿ.ರವಿ

Update: 2019-09-11 17:28 GMT

ಮೈಸೂರು,ಸೆ,11: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯ ನಡೆಸುತ್ತಿರುವ ಪ್ರತಿಭಟನೆ ಕುರಿತು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸತ್ಯವಂತರಿಗೆ ಇದು ಕಾಲವಲ್ಲ. ಒಕ್ಕಲಿಗ ಸಮುದಾಯಕ್ಕೆ ಯಾರು ಆದರ್ಶ ಆಗಬೇಕು ಎಂಬುದನ್ನು ಅವರೇ ತೀರ್ಮಾನ ಮಾಡಿಕೊಳ್ಳಲಿ. ಶಾಂತವೇರಿ ಗೋಪಾಲಗೌಡರು, ಕುವೆಂಪು, ಕೆಂಗಲ್ ಹನುಮಂತಯ್ಯ ಅವರಂತಹ ಮಹನೀಯರು ಆದರ್ಶರಾಗಬೇಕೋ ಅಥವಾ ಇನ್ಯಾರು ಆದರ್ಶ ಆಗಬೇಕು ಎಂಬುದನ್ನು ತೀರ್ಮಾನ ಮಾಡಿಕೊಳ್ಳಲಿ ಎಂದು ಸಚಿವ ಸಿ.ಟಿ ರವಿ ಪ್ರತಿಭಟನಾಕಾರರಿಗೆ ತಿರುಗೇಟು ನೀಡಿದರು.

ನಾನು ಸತ್ಯ ಹೇಳಿದರೆ ಕೆಲವರಿಗೆ ಅಪಥ್ಯವಾಗುತ್ತದೆ. ಈಡಿಗೆ ಯಾವ ಜಾತಿ ಇದೆ, ಯಾವ ಪಕ್ಷ ಇದೆ. ಇ.ಡಿ ಹುಟ್ಟುಹಾಕಿದವರು ಯಾರು? ಈಡಿ ಹುಟ್ಟುಹಾಕಿದ್ದು ಭಾರತೀಯ ಜನತಾ ಪಾರ್ಟಿ ಅಲ್ಲ. ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿ ಸಂಬಂಧ ಇಡಿ ತನಿಖೆ ಮಾಡುತ್ತಿದೆ. ತನಿಖೆ ಮಾಡೋದೇ ತಪ್ಪು ಎಂದರೆ ಹೇಗೆ ಎಂದು ಪ್ರಶ್ನಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News