ತಬ್ರೇಝ್ ಅನ್ಸಾರಿ ಹತ್ಯೆ ಆರೋಪಿಗಳ ಮೇಲಿನ ಕೊಲೆ ಆರೋಪ ಕೈಬಿಟ್ಟಿರುವುದು ದುರದೃಷ್ಟಕರ: ಕೇಂದ್ರ ಸಚಿವ

Update: 2019-09-12 08:49 GMT

ಹೊಸದಿಲ್ಲಿ, ಸೆ.12: ತಬ್ರೇಝ್ ಅನ್ಸಾರಿ ಗುಂಪು ಹತ್ಯೆ ಪ್ರಕರಣದ 11 ಆರೋಪಿಗಳ ವಿರುದ್ಧದ ಕೊಲೆ ಆರೋಪವನ್ನು ಜಾರ್ಖಂಡ್ ಪೊಲೀಸರು ಕೈಬಿಟ್ಟ ಎರಡು ದಿನಗಳ ಬಳಿಕ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ, ಈ ಬೆಳವಣಿಗೆಯನ್ನು ‘ದುರದೃಷ್ಟಕರ’ ಎಂದು ಬಣ್ಣಿಸಿದ್ದಾರಲ್ಲದೆ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ. ಕೇಂದ್ರ ಗೃಹ ಸಚಿವಾಲಯ ಜಾರ್ಖಂಡ್ ಸರಕಾರದ ಜತೆ ಈ ವಿಚಾರ ಚರ್ಚೆ ನಡೆಸಲಿದೆ ಎಂದು ಅವರು ಹೇಳಿದರು.

ಬಿಜೆಪಿ ಆಡಳಿತಾವಧಿಯಲ್ಲಿ ಹೆಚ್ಚುತ್ತಿರುವ ಗುಂಪು ಹತ್ಯೆ ಪ್ರಕರಣಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘‘ಎಲ್ಲಾ ಸರಕಾರಗಳು (ಕೇಂದ್ರ ಮತ್ತು ರಾಜ್ಯ) ಗುಂಪು ಥಳಿತ ಘಟನೆಗಳಿಗೆ ಅಂತ್ಯ ಹಾಡಬೇಕು, ಇದು ಕೇವಲ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ನಡೆಯುತ್ತಿಲ್ಲ, ಪಶ್ಚಿಮ ಬಂಗಾಳದಲ್ಲೂ ನಡೆದಿದೆ’’ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News