ಈ.ಡಿ. ವಿಚಾರಣೆಗೆ ಹಾಜರಾದ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ

Update: 2019-09-12 09:03 GMT

ಹೊಸದಿಲ್ಲಿ, ಸೆ.12: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಅವರನ್ನು ಗುರುವಾರ ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸಿದೆ.

23ರ ವಯಸ್ಸಿನ ಐಶ್ವರ್ಯಾ ಬೆಂಗಳೂರಿನಲ್ಲಿ ನೆಲೆಸಿದ್ದು, ವಿಚಾರಣೆಗೆ ಹಾಜರಾಗಲು ದಿಲ್ಲಿಗೆ ಬರುವಂತೆ ಈ.ಡಿ. ಮಂಗಳವಾರ ನೋಟಿಸ್ ಜಾರಿಗೊಳಿಸಿತ್ತು. ಶಿವಕುಮಾರ್ ಅವರನ್ನು ವಿಚಾರಣೆ ನಡೆಸಲು ಇಂದು ಈ.ಡಿ. ಮುಖ್ಯ ಕಚೇರಿಗೆ ಕರೆ ತರಲಾಗಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News