×
Ad

ಬಂಟ್ವಾಳ: ನೇಣು ಬಿಗಿದು ಯುವಕ ಆತ್ಮಹತ್ಯೆ

Update: 2019-09-12 18:54 IST

ಬಂಟ್ವಾಳ, ಸೆ. 12: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಮೂಡ ಗ್ರಾಮದ ಅಜ್ಜಿಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ. ಬಂಟ್ವಾಳ ಪುರಸಭಾ ಸದಸ್ಯೆ ವಿದ್ಯಾವತಿ ಹಾಗೂ ಪ್ರಮೋದ್ ಕುಮಾರ್ ಅವರ ಪುತ್ರ ಪ್ರಶಾಂತ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ.

ಕೊಲ್ಲಿ ರಾಷ್ಟ್ರದಲ್ಲಿ ಉದ್ಯೋಗಿಯಾಗಿದ್ದ ಪ್ರಶಾಂತ್, ಇತ್ತೀಚೆಗೆ ಊರಿಗೆ ಮರಳಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮಹಜರು ನಡೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News