ಸರಕಾರಿ ಶಾಲೆಗಳ ಕುಡಿಯುವ ನೀರು, ಶೌಚಾಲಯ ನಿರ್ವಹಣೆಗೆ 25 ಕೋಟಿ ರೂ.ಬಿಡುಗಡೆ

Update: 2019-09-12 14:29 GMT

ಬೆಂಗಳೂರು, ಸೆ.12: ಶಿಕ್ಷಣ ಇಲಾಖೆ 2019-20ನೇ ಸಾಲಿನ ಆಯವ್ಯಯದಲ್ಲಿ 25 ಕೋಟಿ ರೂ.ಅನುದಾನವನ್ನು ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಗಳ ವಾರ್ಷಿಕ ನಿರ್ವಹಣೆಗಾಗಿ ಬಿಡುಗಡೆ ಮಾಡಿದೆ. 

ಕಿರಿಯ ಪ್ರಾಥಮಿಕ ಶಾಲೆಯೊಂದಕ್ಕೆ 4525 ರೂ., ಹಿರಿಯ ಪ್ರಾಥಮಿಕ ಶಾಲೆಗೆ 5700 ರೂ. ಹಾಗೂ ಪ್ರೌಢಶಾಲೆಗೆ 6370 ರೂ.ನಂತೆ 2019-20ನೆ ಸಾಲಿನಲ್ಲಿ ಶಾಲಾ ಸೌಲಭ್ಯಗಳ ನಿರ್ವಹಣೆಗಾಗಿ 25 ಕೋಟಿ ರೂ. ಅನುದಾನ ನಿಗದಿ ಪಡಿಸಲಾಗಿದೆ.

ಮೊದಲನೇ ತ್ರೈಮಾಸಿಕ ಅವಧಿಗೆ ಮೂಲಭೂತ ಸೌಕರ್ಯಗಳ ನಿರ್ವಹಣೆಗಾಗಿ 625 ಲಕ್ಷ ರೂ.ಅನುದಾನವನ್ನು ನಿಯಮಾನುಸಾರ ಭರಿಸಲು ರಾಜ್ಯದ ಎಲ್ಲ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಹಾಗೂ ಎಸ್‌ಡಿಎಂಸಿ ಜಂಟಿ ಖಾತೆಗಳಿಗೆ ಅನುದಾನವನ್ನು ನೇರವಾಗಿ ಆಯುಕ್ತರ ಕಚೇರಿಯಿಂದ ಜಮೆ ಮಾಡಲಾಗಿದೆ. ಈ ಅನುದಾನವನ್ನು ಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಗಳ ವಾರ್ಷಿಕ ನಿರ್ವಹಣೆಗೆ ಮಾತ್ರ ಭರಿಸತಕ್ಕದ್ದು, ಹಣ ಬಳಕೆ ಕುರಿತಂತೆ ಕಡ್ಡಾಯವಾಗಿ ಆಯಾ ಶಾಲಾ ಎಸ್‌ಡಿಎಂಸಿ ಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳುವುದು ಕಡ್ಡಾಯ. ಇದರಲ್ಲಿ ದುರುಪಯೋಗ ಕಂಡುಬಂದಲ್ಲಿ ಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News