ರಾ.ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ನೇರ ಪ್ರಸಾರ

Update: 2019-09-12 15:31 GMT

ಉಡುಪಿ, ಸೆ.12: ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಪಶುಗಳಲ್ಲಿ ಕಾಲುಬಾಯಿ ಜ್ವರ ಮತ್ತು ಕಂದು ರೋಗಗಳ ನಿಯಂತ್ರಣ ಹಾಗೂ ರಾಷ್ಟ್ರೀಯ ಕೃತಕ ಗರ್ಭಧಾರಣ ಕಾರ್ಯಕ್ರಮದ ನೇರ ಪ್ರಸಾರ ಬುಧವಾರ ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಿತು.

ಇದೇ ಸಂದರ್ಭ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವದ್ಯಾನಿಲಯ, ಭಾರತೀಯ ಕೃಷಿ ಅನುಸಂಧಾನ ಪರಿಷತ್ ಹೊಸದಿಲ್ಲಿ, ಜಿಲ್ಲಾ ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬ್ರಹ್ಮಾವರ ಐಸಿಎಆರ್,ಕೃಷಿ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಅ್ಯಕ್ಷ ದಿನಕರ ಬಾಬು ಉದ್ಘಾಟಿಸಿದರು.

ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸದಸ್ಯ ಸುಧಾಕರ ಶೆಟ್ಟಿ ಮೈರ್ಮಾಡಿ, ತಾಪಂ ಸದಸ್ಯ ಸುಧೀರ್ ಕುಮಾರ್ ಶೆಟ್ಟಿ, ಪಶುಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ. ಸರ್ವೋತ್ತಮ ಉಡುಪ, ಡಾ.ಮಹೇಶ್ ಶೆಟ್ಟಿ ಉಡುಪಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ, ದ.ಕ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಜಗದೀಶ ಕಾರಂತ್, ಸಹ ಸಂಶೋಧನಾ ನಿರ್ದೇಶಕ ಡಾ. ಎಸ್. ಯು. ಪಾಟೀಲ್, ಡಿಪ್ಲೋಮಾ ಕಾಲೇಜಿನ ಪ್ರಾಂಶುಪಾಲ ಡಾ. ಸುಧೀರ್ ಕಾಮತ್ ಉಪಸ್ಥಿತರಿದ್ದರು.

ಕೆವಿಕೆ ಮುಖ್ಯಸ್ಥ ಡಾ. ಬಿ. ಧನಂಜಯ ಸ್ವಾಗತಿಸಿದರು. ಡಾ.ಎನ್.ಇ.ನವೀನ್ ಕಾರ್ಯಕ್ರಮ ನಿರೂಪಿಸಿ ಚೈತನ್ಯ ವಂದಿಸಿದರು. ಈ ಕಾರ್ಯಕ್ರಮ ದೇಶಾದ್ಯಂತ 687 ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ನೇರ ಪ್ರಸಾರಗೊಂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News