ನಕಲಿ ಫ್ಲೋರ್ ಕ್ಲೀನರ್ ಮಾರಾಟ: ಗುಜರಾತ್ ಮೂಲದ ಇಬ್ಬರ ಬಂಧನ

Update: 2019-09-12 16:25 GMT

ಬೆಂಗಳೂರು, ಸೆ.12: ಪ್ರತಿಷ್ಠಿತ ಕಂಪೆನಿಗಳ ಫ್ಲೋರ್ ಕ್ಲೀನರ್‌ಗಳನ್ನು ನಕಲು ಮಾಡಿ, ಮಾರಾಟ ಮಾಡುತ್ತಿದ್ದ ಗೋದಾಮಿನ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, ಗುಜರಾತ್ ಮೂಲದ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗುಜರಾತ್ ರಾಜ್ಯದ ಕಚ್ ಜಿಲ್ಲೆಯ ಮಹೇಶ್, ದವಲ್ ಎಂಬುವರು ಬಂಧಿತ ಆರೋಪಿಗಳಾಗಿದ್ದು, ನವೀನ್‌ ಪಟೇಲ್ ಎಂಬಾತ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ಆಸ್ಟಿನ್‌ಟೌನ್ ವ್ಯಾಪ್ತಿಯ ಗೋದಾಮಿನಲ್ಲಿ ಪ್ರತಿಷ್ಠಿತ ಕಂಪೆನಿಗಳಾದ ಹಾರ್ಪೀಕ್, ಕೋಲಿನ್ ಸೇರಿ ಇತರೆ ಕಂಪೆನಿಗಳ ಹೆಸರಿನಲ್ಲಿ ನಕಲು ಮಾಡಿದ ಫ್ಲೋರ್ ಕ್ಲೀನರ್‌ಗಳನ್ನು ತಯಾರಿಸಿ, ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಸಿಸಿಬಿ ತಿಳಿಸಿದೆ.

ಪ್ರಕರಣ ಸಂಬಂಧ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದು, 9.32 ಲಕ್ಷ ರೂ. ಬೆಲೆ ಬಾಳುವ 665 ಬಾಟಲಿಗಳು ಜಪ್ತಿ ಮಾಡಲಾಗಿದೆ. ಅದೇ ರೀತಿ, ಬೈಯಪ್ಪನಹಳ್ಳಿ ವ್ಯಾಪ್ತಿಯ ಪ್ರಕರಣವೊಂದರಲ್ಲಿ 13.32 ಲಕ್ಷ ರೂ. ಮೌಲ್ಯದ ಮಾಲು ಜಪ್ತಿ ಮಾಡಿ, ವಿವಿಧ ಪೊಲೀಸ್ ಠಾಣೆಗಳಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News