ಗಾಂಧಿ, ಪಟೇಲ್, ಅಂಬೇಡ್ಕರ್ ಸಂದೇಶಗಳನ್ನು ತಪ್ಪಾಗಿ ಬಿಂಬಿಸಲಾಗುತ್ತಿದೆ: ಕೇಂದ್ರದ ವಿರುದ್ಧ ಸೋನಿಯಾ ಆಕ್ರೋಶ

Update: 2019-09-12 17:02 GMT

ಹೊಸದಿಲ್ಲಿ, ಸೆ. 12: ದೇಶದ ಆರ್ಥಿಕತೆ ತೀವ್ರ ಶೋಚನೀಯ ಸ್ಥಿತಿಯಲ್ಲಿದೆ. ಆದರೆ, ಕೇಂದ್ರ ಸರಕಾರ ರಾಜಕೀಯ ದ್ವೇಷದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಜನಾದೇಶದ ದುರ್ಬಳಕೆ ಅತ್ಯಂತ ಅಪಾಯಕಾರಿ ಫ್ಯಾಶನ್. ಗಾಂಧಿ, ಪಟೇಲ್ ಹಾಗೂ ಅಂಬೇಡ್ಕರ್ ಅವರಂತಹ ನಾಯಕರ ಸಂದೇಶಗಳನ್ನು ತಪ್ಪಾಗಿ ಪ್ರಸ್ತುತಪಡಿಸುವ ಮೂಲಕ ತಮ್ಮ ಅಸಹ್ಯ ಕಾರ್ಯಸೂಚಿ ಕಾರ್ಯಗತಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಆಂದೋಲನದ ಕಾರ್ಯಸೂಚಿ ಹೊಂದಬೇಕು. ಪುಟಿದೇಳುವ ನಮ್ಮ ಸಂಕಲ್ಪವನ್ನು ಈಗ ಪರಿಶೀಲಿಸಲಾಗುತ್ತಿದೆ ಎಂದು ಸೋನಿಯಾ ಗಾಂಧಿ ಹೇಳಿದರು. ಸಭೆಯಲ್ಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಜರಾಗಿರಲಿಲ್ಲ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ವಿವಿಧ ರಾಜ್ಯಗಳ ಎಐಸಿಸಿಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಉಸ್ತುವಾರಿಗಳು, ಕಾಂಗ್ರೆಸ್ ವರಿಷ್ಠರು ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News