×
Ad

ಚಾಮುಂಡಿ ಬೆಟ್ಟದ ಬೀದಿ ಬದಿಯ ಅಂಗಡಿಗಳ ತೆರವು

Update: 2019-09-12 22:40 IST

ಮೈಸೂರು,ಸೆ.12: ಇಂದು ಬೆಳ್ಳಂಬೆಳಗ್ಗೆ ಚಾಮುಂಡಿ ಬೆಟ್ಟದಲ್ಲಿ ಜೆಸಿಬಿ ಘರ್ಜಿಸಿದೆ. ಕಂದಾಯ ಇಲಾಖೆ, ಗ್ರಾಮ ಠಾಣಾ ಮತ್ತು ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಬೀದಿ ಬದಿಯ 250  ಅಂಗಡಿ ಮಳಿಗೆಗಳನ್ನು ಅಧಿಕಾರಿಗಳು ತೆರವುಗೊಳಿಸಿದರು.

ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯ ಮಳಿಗೆಗಳನ್ನು ತೆರವುಗೊಳಿಸಲಾಯಿತು. ಡಿಸಿಪಿ ಮುತ್ತುರಾಜ್, ಎಸಿಪಿ ಲೋಕೇಶ್ ನೇತೃತ್ವದಲ್ಲಿ 350ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳ ಭದ್ರತೆಯಲ್ಲಿ 5 ಜೆಸಿಬಿಗಳೊಂದಿಗೆ ತೆರವು ಕಾರ್ಯಾಚರಣೆ ನಡೆಸಲಾಯಿತು.

ಅನಧಿಕೃತವಾಗಿ ನಿರ್ಮಿಸಲಾಗಿದ್ದ ಅಂಗಡಿ ಮಳಿಗೆಗಳನ್ನು ತೆರವುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಮಳಿಗೆಗಳು ಮತ್ತು ಅಂಗಡಿಗಳ ಮಾಲಕರಿಗೆ ಮನವಿ ಮಾಡಿಕೊಂಡಿದ್ದರು. ಆದರೆ, ಅವರು ಇದಕ್ಕೆ ಒಪ್ಪಿರಲಿಲ್ಲ ಎನ್ನಲಾಗಿದೆ. ಅಲ್ಲದೆ, ಅಂಗಡಿಗಳನ್ನು ಉಳಿಸಿಕೊಳ್ಳಲು ಪ್ರತಿಭಟನೆಯ ಮಾರ್ಗ ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ಮಳಿಗೆಗಳು ಮತ್ತು ಅಂಗಡಿಗಳ ತೆರವು ಕಾರ್ಯಾಚರಣೆ ನಡೆಸಲಾಯಿತು.

ಚಾಮುಂಡಿಬೆಟ್ಟದ ದೇವಸ್ಥಾನದ ರಸ್ತೆಯನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News