ವಿದ್ಯಾರ್ಥಿ ವೇತನ ವಿಳಂಬ: ಕ್ಯಾಂಪಸ್ ಫ್ರಂಟ್‌ನಿಂದ ಅಲ್ಪಸಂಖ್ಯಾತ ನಿರ್ದೇಶನಾಲಯ ಕಚೇರಿಗೆ ಘೇರಾವ್

Update: 2019-09-12 17:14 GMT

ಬೆಂಗಳೂರು, ಸೆ.12: ಅಲ್ಪಸಂಖ್ಯಾತ ಇಲಾಖೆಯ ವಿದ್ಯಾರ್ಥಿ ವೇತನದ ವಿಳಂಬ ನೀತಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಂಗಳೂರು ಜಿಲ್ಲಾ ಸಮಿತಿ(ಸಂತ್ರಸ್ತ ವಿದ್ಯಾರ್ಥಿಗಳು ಸೇರಿ) ಬೆಂಗಳೂರು ಅಲ್ಪಸಂಖ್ಯಾತ ನಿರ್ದೇಶನಾಲಯ ಕಚೇರಿಗೆ ಗುರುವಾರ ದಿಢೀರ್ ಘೇರಾವು ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾಂಪಸ್ ಫ್ರಂಟ್‌ನ ರಾಜ್ಯ ಕಾರ್ಯದರ್ಶಿ ಅಶ್ರಫ್ ದಾವಣಗೆರೆ, ಕೇಂದ್ರ ಸರಕಾರದಿಂದ ಪ್ರತಿ ವರ್ಷ ನೀಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನಗಳು ಇನ್ನೂ ರಾಜ್ಯದ ಹಲವು ವಿದ್ಯಾರ್ಥಿಗಳಿಗೆ ಮಂಜೂರಾಗದೇ ಬಾಕಿಯಿದೆ. 2017-18 ಮತ್ತು 19ನೆ ಸಾಲಿನ ಹಲವು ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಬಾಕಿಯಿಟ್ಟಿದ್ದರಿಂದ ವಿದ್ಯಾಭ್ಯಾಸಕ್ಕೆ ತೊಂದರೆ ಆಗುತ್ತಿದೆ ಎಂದು ತಿಳಿಸಿದರು.

ವಿದ್ಯಾರ್ಥಿ ವೇತನವನ್ನು 2 ದಿವಸಗಳಲ್ಲಿ ಮಂಜೂರು ಮಾಡದಿದ್ದರೆ ರಾಜ್ಯಾದ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸಿ ಬೆಂಗಳೂರಿನ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಜಿಲ್ಲಾಧ್ಯಕ್ಷ ಝಬೈರ್, ಕಾರ್ಯದರ್ಶಿ ಇಬ್ರಾಹಿಂ, ಸದಸ್ಯ ಆಕಿಬ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News