ಭಟ್ಕಳ ತಾಲೂಕು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ

Update: 2019-09-12 17:58 GMT

ಭಟ್ಕಳ: ಜಿ.ಪಂ, ಶಿಕ್ಷಣ ಇಲಾಖೆ ಉತ್ತರಕನ್ನಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಭಟ್ಕಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇದರ ಸಹಯೋಗದೊಂದಿಗೆ ತಾಲೂಕಿನ ಬೆಳಕೆ ಪ್ರೌಢಶಾಲಾ ಮೈದಾನದಲ್ಲಿ ಭಟ್ಕಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಜಿ.ಪಂ.ಅಧ್ಯಕ್ಷೆ ಜಯಶ್ರೀ ಮೊಗೇರ್ ಗುರುವಾರ ಚಾಲನೆ ನೀಡಿದರು. 

ನಂತರ ಮಾತನಾಡಿದ ಅವರು, ಭಟ್ಕಳ ತಾಲೂಕಿನಲ್ಲಿ ಹಲವು ಕ್ರೀಡಾಪ್ರತಿಭೆಗಳಿದ್ದು ಉತ್ತಮ ತರಬೇತು ನೀಡಿದರೆ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುತ್ತಾರೆ. ಕ್ರೀಡಾಕ್ಷೇತ್ರವು ಬಹಳ ವಿಶಾಲಗೊಂಡಿದ್ದು ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಬಹಳ ಸುಲಭವಾಗಿ ಮಾಹಿತಿಗಳು ಲಭಿಸುತ್ತಿದ್ದು ಈ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಬೇಕಾಗಿದೆ ಎಂದರು. 

ಬೆಳಕೆ ಗ್ರಾ.ಪಂ ಅಧ್ಯಕ್ಷ ರಮೇಶ್ ನಾಯ್ಕ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. 

ಜಿ.ಪಂ ಸದಸ್ಯ ಸಿಂಧೂ ಭಾಸ್ಕರ್ ನಾಯ್ಕ ಕ್ರೀಡಾದ್ವಜಾರೋಹಣಗೈದು ವಿದ್ಯಾರ್ಥಿಗಳಿಗೆ ಶುಭಾ ಹಾರೈಸಿದರು. ತಾ.ಪಂ ಸದಸ್ಯೆ ಮೀನಾಕ್ಷಿ ನಾಯ್ಕ, ಜಯಲಕ್ಷ್ಮಿ ಗೊಂಡ ವಿದ್ಯಾರ್ಥಿಗಳನ್ನುದ್ದೇಶಿ ಮಾತನಾಡಿದರು. 

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಮುಂಜಿ ಪ್ರಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. 

ಕ್ಷೇತ್ರ ಸಮನ್ವಯಾಧಿಕಾರಿ ಯಲ್ಲಮ್ಮ ಮರಿಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಕರ್ ನಾಯ್ಕ, ತಾಲೂಕು  ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್ ನಾಯ್ಕ, ಗೋಪಾಲ ನಾಯ್ಕ, ಪ್ರಕಾಶ ಶೇಟ್ ಶಿರಾಲಿ, ಎಂ.ಬಿ.ನಾಯ್ಕ ಮತ್ತಿತರರು ಉಪಸ್ಥಿತರಿದ್ದರು. 

ಮಧುಕರ್ ಹೆಗಡೆಕರ್ ಮತ್ತು ಸುಜಾತ ಗೌಡ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ವಿ.ನಾಯ್ಕ ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News