ಸೆ.27ಕ್ಕೆ ಬಿಬಿಎಂಪಿ ಮೇಯರ್ ಆಯ್ಕೆಗೆ ಚುನಾವಣೆ

Update: 2019-09-13 09:00 GMT

ಬೆಂಗಳೂರು, ಸೆ.13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್ ಗಂಗಾಬಿಕಾ ಮಲ್ಲಿಕಾರ್ಜುನ್ ಅವರ ಅಧಿಕಾರವಧಿ ಸೆ.28ಕ್ಕೆ ಕೊನೆಗೊಳ್ಳಲಿದೆ. ಸೆ.27ಕ್ಕೆ ನೂತನ ಮೇಯರ್ ಆಯ್ಕೆಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ಸಂಬಂಧ ಇಂದು (ಸೆ.13) ಸಂಜೆ ವೇಳೆಗೆ ಅಧಿಸೂಚನೆ ಹೊರಬೀಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ನಾಲ್ಕು ವರ್ಷಗಳಿಂದ ಬಿಬಿಎಂಪಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳ ಆಡಳಿತ ಇತ್ತು. ಇದೀಗ ಕಾಂಗ್ರೆಸ್ ಪಕ್ಷದ ನಾಲ್ವರು ಮತ್ತು ಜೆಡಿಎಸ್‌ನ ಒಬ್ಬರು ಶಾಸಕರ ರಾಜೀನಾಮೆ ನೀಡಿದ್ದಾರೆ. ಈ ನಡುವೆ ಬಿಜೆಪಿ ಬಿಬಿಎಂಪಿ ಅಧಿಕಾರ ಹಿಡಿಯಲು ಕನಸರತ್ತು ನಡೆಸಿದ್ದು ಮೇಯರ್ ಚುನಾವಣೆ ಭಾರೀ ಕುತೂಹಲ ಮೂಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News