×
Ad

ಕೋರೆಗಾಂವ್-ಭೀಮಾ ಪ್ರಕರಣ: ನವ್ಲಾಖಾ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

Update: 2019-09-13 19:47 IST

 ಮುಂಬೈ,ಸೆ.13: ಕೋರೆಗಾಂವ್-ಭೀಮಾ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮತ್ತು ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ನಾಗರಿಕ ಹಕ್ಕುಗಳ ಹೋರಾಟಗಾರ ಗೌತಮ ನವ್ಲಾಖಾ ಅವರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸಲು ಬಾಂಬೆ ಉಚ್ಚ ನ್ಯಾಯಾಲಯವು ಶುಕ್ರವಾರ ನಿರಾಕರಿಸಿದೆ. ಪ್ರಕರಣದಲ್ಲಿ ನವ್ಲಾಖಾ ವಿರುದ್ಧ ಮೇಲ್ನೋಟಕ್ಕೆ ಸಾಕಷ್ಟು ಸಾಕ್ಷ್ಯಧಾರಗಳಿವೆ ಎಂದು ಅದು ಹೇಳಿದೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದರೆ ಸಮಗ್ರ ತನಿಖೆ ಅಗತ್ಯವಾಗಿದೆ ಎನ್ನುವುದು ನಮ್ಮ ಅಭಿಪ್ರಾಯವಾಗಿದೆ. ಪ್ರಕರಣವು ಸಾಕ್ಷಾಧಾರಗಳನ್ನು ಹೊಂದಿದೆ ಎಂದು ನ್ಯಾಯಮೂರ್ತಿಗಳಾದ ರಂಜಿತ್ ಮೋರೆ ಮತ್ತು ಭಾರತಿ ಡಾಂಗ್ರೆ ಅವರ ಪೀಠವು ಹೇಳಿತು.

ಪುಣೆ ಪೊಲೀಸರು ಜನವರಿ,2018ರಲ್ಲಿ ತನ್ನ ವಿರುದ್ಧ ದಾಖಲಿಸಿದ್ದ ಎಫ್‌ಐಆರ್‌ನ್ನು ರದ್ದುಗೊಳಿಸುವಂತೆ ಕೋರಿ ನವ್ಲಾಖಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News