ಸೆ.17ಕ್ಕೆ ಕಲಬುರಗಿ ಪೀಠ ಉದ್ಘಾಟನೆ

Update: 2019-09-13 15:09 GMT

ಬೆಂಗಳೂರು, ಸೆ.13: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಕಲಬುರಗಿ ಪೀಠದ ಉದ್ಘಾಟನೆ ಸಮಾರಂಭವನ್ನು ಸೆ.17 ರಂದು ಜಿಲ್ಲಾ ನ್ಯಾಯಾಲಯದ ಪ್ರಾಂಗಣದಲ್ಲಿ ಆಯೋಜಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪೀಠವನ್ನು ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಗೋವಿಂದ ಕಾರಜೋಳ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಸಚಿವ ಜೆ.ಸಿ.ಮಾಧುಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News