ಮುಖ್ಯಮಂತ್ರಿಯನ್ನು ಭೇಟಿಯಾದ ಶಾಸಕ ಕೃಷ್ಣಬೈರೇಗೌಡ: ಕಸದ ಸಮಸ್ಯೆ ಬಗೆಹರಿಸುವಂತೆ ಮನವಿ

Update: 2019-09-13 16:36 GMT

ಬೆಂಗಳೂರು, ಸೆ.13: ನಗರದ ಶೇ.75ರಷ್ಟು ಕಸವನ್ನು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿಯೇ ವಿಲೇವಾರಿ ಮಾಡಲಾಗುತ್ತಿದ್ದು, ಇದರಿಂದ ಸ್ಥಳೀಯರು ನಾನಾ ಸಮಸ್ಯೆಗೆ ಈಡಾಗಿದ್ದಾರೆ. ಕೂಡಲೇ ಇದನ್ನು ಪರಿಹರಿಸಬೇಕೆಂದು ಶಾಸಕ ಕೃಷ್ಣಬೈರೇಗೌಡ ಒತ್ತಾಯಿಸಿದ್ದಾರೆ.

ಶುಕ್ರವಾರ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿದ ಅವರು, ನಗರದಲ್ಲಿ ಉತ್ಪತ್ತಿಯಾಗುವ ಬಹುತೇಕ ಕಸವನ್ನು ಬ್ಯಾಟರಾಯನಪುರದಲ್ಲಿ ಸುರಿಯಲಾಗುತ್ತಿದೆ. ಇದರಿಂದ ಸ್ಥಳೀಯರು ಹಲವಾರು ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಇದರಿಂದ ಸಾರ್ವಜನಿಕರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಸಮಸ್ಯೆಯನ್ನು ಕೂಡಲೇ ಇತ್ಯರ್ಥ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಇದಕ್ಕೆ ಪೂರಕವಾಗಿ ಸ್ಪರ್ಧಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಈ ಸಂಬಂಧ ಬಿಬಿಎಂಪಿ ಅಧಿಕಾರಿಗಳು ಮತ್ತು ಆಯುಕ್ತರ ಜತೆ ಚರ್ಚೆ ನಡೆಸಿ ಸಮಸ್ಯೆಯನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News