ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್: ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ ಇಸ್ಮಾಯೀಲ್ ನಮೀರ್

Update: 2019-09-13 17:01 GMT

ಮಂಗಳೂರು, ಸೆ.13: ಇತ್ತೀಚೆಗೆ ಮೂಡುಬಿದಿರೆಯಲ್ಲಿ ಶೋರಿಯನ್-ರಿಯೋ ಕರಾಟೆ ಅಸೋಸಿಯೇಶನ್ ಹಮ್ಮಿಕೊಂಡಿದ್ದ 17ನೆ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಇಸ್ಮಾಯೀಲ್ ನಮೀರ್ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಶೋರಿನ್ ರಿಯೋ ಅಸೋಸಿಯೇಶನ್ ಮೂಡುಬಿದಿರೆ ಮತ್ತು ಎಂ.ಕೆ. ಅನಂತರಾಜ್ ಕಾಲೇಜ್ ಆಫ್ ಫಿಸಿಕಲ್ ಎಜುಕೇಶನ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಇಸ್ಮಾಯೀಲ್ ನಮೀರ್ ಬರಾಕಾ ಇಂಟರ್ ನ್ಯಾಶನಲ್ ಸ್ಕೂಲ್ ನ ವಿದ್ಯಾರ್ಥಿಯಾಗಿದ್ದು, 30 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ನಮೀರ್ ತಂದೆ ನಿಸಾರ್ ಅಹ್ಮದ್ ರುಕ್ನುದ್ದೀನ್ ಭಟ್ಕಳ ಮೂಲದವರಾಗಿದ್ದು, ಹಲವು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದಾರೆ.

ನಮೀರ್ ಈ ಹಿಂದೆಯೂ ಹಲವು ರಾಜ್ಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಗಳಲ್ಲಿ ಪಾಲ್ಗೊಂಡಿದ್ದು, ಕಳೆದ ಬಾರಿ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಸೇರಿ ಹಲವು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಕಳೆದ ಬಾರಿ ನಡೆದ 16ನೆ ಚಾಂಪಿಯನ್ ಶಿಪ್ ನಲ್ಲಿ 20 ಕೆಜಿಯೊಳಗಿನ ವಿಭಾಗದಲ್ಲಿ ಭಾಗವಹಿಸಿದ್ದ ನಮೀರ್ 3 ಸ್ಥಾನಿಯಾಗಿ, 4ನೆ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದರು. ಮುಂಬೈಯಲ್ಲಿ ವಿಶ್ವ ಫುನಕೊಶಿ ಶೊಟೊಕಾನ್ ಸಂಸ್ಥೆ ಹಮ್ಮಿಕೊಂಡಿದ್ದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಮೂರನೆ ಸ್ಥಾನಿಯಾಗಿ ನಮೀರ್ ಸಾಧನೆ ಮೆರೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News