'ಕಾವೇರಿ ಕೂಗು': ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

Update: 2019-09-13 17:01 GMT
'ಕಾವೇರಿ ಕೂಗು' ಅಭಿಯಾನ

ಬೆಂಗಳೂರು, ಸೆ.13: ನದಿಗಾಗಿ ಜಾಥಾ ನಡೆಸುವ ಮೂಲಕ ದೇಶದ ಗಮನ ಸೆಳೆದಿದ್ದ ಈಶಾ ಫೌಂಡೇಷನ್ ಅಧ್ಯಕ್ಷ, ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದ ತಂಡ ಕೈಗೆತ್ತಿಕೊಂಡಿರುವ ಕಾವೇರಿ ಕೂಗು ಯೋಜನೆ ಪರಿಶೀಲನೆಗೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಲು ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಈ ಕುರಿತು ವಕೀಲ ಎ.ವಿ.ಅಮರ್‌ನಾಥ್ ಅವರು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಸಸಿ ನೆಡುವ ಯೋಜನೆ ಕೈಕೊಂಡಿದ್ದಾರೆ. ಈ ಯೋಜನೆಗೆ ನಮ್ಮದೇನು ಅಭ್ಯಂತರವಿಲ್ಲ. ಆದರೆ, ಸಸಿ ಒಂದಕ್ಕೆ 42 ರೂ.ಸಾರ್ವಜನಿಕರಿಂದ ಸಂಗ್ರಹ ಮಾಡಿ, 242 ಕೋಟಿ ಸಸಿ ನೆಡುವ ಯೋಜನೆಗೆ ನಮ್ಮ ವಿರೋಧವಿದೆ. 242 ಕೋಟಿ ಸಸಿಗೆ ಒಟ್ಟು 10 ಸಾವಿರ ಕೋಟಿ ಹಣ ಸಂಗ್ರಹವಾಗುತ್ತದೆ. ಪರಿಸರ ಮಾಲಿನ್ಯವನ್ನು ಕಾಪಾಡಲು ಸಸಿಯನ್ನು ನೀಡಲಿ, ಆದರೆ, ಸಸಿ ನೀಡಿ ಹಣ ಸಂಗ್ರಹ ಮಾಡಲು ಹೊರಟಿರುವುದಕ್ಕೆ ನಮ್ಮ ವಿರೋಧವಿದೆ. ಅಲ್ಲದೆ, ಯೋಜನೆಗೆ ಸರಕಾರವೂ ಅನುಮತಿಯನ್ನು ನೀಡಿಲ್ಲ. ಹೀಗಾಗಿ, ಕಾವೇರಿ ಕೂಗು ಯೋಜನೆ ಕುರಿತು ಪರಿಶೀಲನೆಗೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಲು ಕೋರಿ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News