ಕಾಶ್ಮೀರದಲ್ಲಿ ಸಾರ್ವಜನಿಕ ಸೇವೆ ನಿರ್ಬಂಧ ಸಡಿಲಿಕೆಗೆ ಅರ್ಜಿ: 'ಮಧ್ಯಪ್ರವೇಶಿಸುವುದಿಲ್ಲ' ಎಂದ ಹೈಕೋರ್ಟ್

Update: 2019-09-13 17:06 GMT

ಬೆಂಗಳೂರು, ಸೆ.13: ಜಮ್ಮು ಕಾಶ್ಮೀರದಲ್ಲಿ ಸ್ಥಗಿತಗೊಳಿಸಲಾಗಿರುವ ಇಂಟರ್‌ನೆಟ್, ಮೊಬೈಲ್ ಹಾಗೂ ಸಾರ್ವಜನಿಕ ಸೇವೆಯನ್ನು ಪುನಃ ಪ್ರಾರಂಭಿಸಲು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಇದೇ ವಿಚಾರಕ್ಕೆ ಸಂಬಂಧಿಸಿದ ಅರ್ಜಿವೊಂದು ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇರುವುದರಿಂದ ಈ ಹಂತದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಹೇಳಿದೆ.

ಈ ಕುರಿತು ಕಾಶ್ಮೀರ ಮೂಲದ ಎಸ್.ಪಿ.ಸುಹೇಲ್ ಅಹಮದ್ ಸಲ್ಲಿಸಿರುವ ಅರ್ಜಿ ವಿಚಾರಣೆ ಶುಕ್ರವಾರ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರಿದ್ದ ನ್ಯಾಯಪೀಠದಲ್ಲಿ ನಡೆಯಿತು. ಜಮ್ಮು ಕಾಶ್ಮೀರದಲ್ಲಿ ಮೊಬೈಲ್, ಇಂಟರ್‌ನೆಟ್ ಸ್ಥಗಿತಗೊಳಿಸಿರುವುದು ಕುರಿತಂತೆಯೇ ಹಲವು ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಬಾಕಿಯಿದೆ. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿ ವಿಚಾರಣೆಯನ್ನು ಅ.14ಕ್ಕೆ ಮುಂದೂಡಿತು.

ಜಮ್ಮು ಕಾಶ್ಮೀರ್‌ದಲ್ಲಿ ಆರ್ಟಿಕಲ್ 370 ರದ್ದು ಆದ ಬಳಿಕ ಅಲ್ಲಿಯ ಜನರೊಂದಿಗೆ ಸಂವಹನ ನಡೆಸಲು ಆಗುತ್ತಿಲ್ಲ. ಹೀಗಾಗಿ, ಈ ನಿರ್ಬಂಧವನ್ನು ಸಡಿಲಿಕೆಗೊಳಿಸಲು ಹಾಗೂ ಸಾರ್ವಜನಿಕ ಸೇವೆಯನ್ನು ಪುನಹ ಪ್ರಾರಂಭಿಸಲು ಕೇಂದ್ರ, ರಾಜ್ಯ ಸರಕಾರ(ಜಮ್ಮು ಕಾಶ್ಮೀರ)ಕ್ಕೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News