ಸೆ.18ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Update: 2019-09-14 12:26 GMT

ಬೆಂಗಳೂರು, ಸೆ. 14: ವಿಪಕ್ಷ ನಾಯಕನ ಆಯ್ಕೆ, ಪ್ರವಾಹ ಹಾಗೂ ಬರ ಪೀಡಿತ ಪ್ರದೇಶಗಳಲ್ಲಿ ಸರಕಾರ ಕೈಗೊಂಡಿರುವ ಪರಿಹಾರ ಕ್ರಮಗಳು, ‘ಕೈ’ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡುವಲ್ಲಿ ಆಗುತ್ತಿರುವ ತಾರತಮ್ಯ, ಅನುದಾನ ಕಡಿತದ ಕುರಿತು ಚರ್ಚಿಸಲು ಸೆ.18ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಸೆ.18ರ ಬೆಳಗ್ಗೆ 10ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಪಾಲ್ಗೊಳ್ಳಲಿದ್ದಾರೆ.

ಬರ-ನೆರೆ ಪರಿಹಾರ ವಿಚಾರದಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರದ ವೈಫಲ್ಯಗಳ ಕುರಿತು ಪಕ್ಷದ ಎಲ್ಲ ಶಾಸಕರು, ಮೇಲ್ಮನೆ ಸದಸ್ಯರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಸಲಹೆ, ಸೂಚನೆಗಳನ್ನು ನೀಡಬೇಕೆಂದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆಹ್ವಾನ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News