ಗುಜರಾತ್ ಮಾದರಿಯಲ್ಲಿ ದಂಡದ ಪ್ರಮಾಣ ಇಳಿಕೆ: ಸಾರಿಗೆ ಸಚಿವ ಲಕ್ಷ್ಮಣ ಸವದಿ

Update: 2019-09-14 14:34 GMT

ಹೊಸದಿಲ್ಲಿ, ಸೆ.14: ನೂತನ ಮೋಟಾರು ಕಾಯ್ದೆ ಅನ್ವಯ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ವಿಧಿಸಲಾಗುತ್ತಿರುವ ದಂಡದ ಪ್ರಮಾಣವನ್ನು ಗುಜರಾತ್ ಮಾದರಿಯಲ್ಲಿ ಕಡಿಮೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಮೂರು ದಿನಗಳಲ್ಲಿ ದಂಡವನ್ನು ಕಡಿಮೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗುವುದು. ಗುಜರಾತ್ ರಾಜ್ಯದಲ್ಲಿ ಅಲ್ಲಿನ ಸರಕಾರ ದಂಡ ಕಡಿಮೆ ಮಾಡಿ ಅಧಿಸೂಚನೆ ಹೊರಡಿಸಿದೆ ಎಂದರು.

ಗುಜರಾತಿನ ಅಧಿಸೂಚನೆ ಪ್ರತಿಯನ್ನು ತರಿಸಿಕೊಂಡಿದ್ದೇವೆ. ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಚರ್ಚೆ ಮಾಡಿದ್ದೇವೆ. ಕಾನೂನು ಇಲಾಖೆ ಸಲಹೆ ಪಡೆದು ದಂಡವನ್ನು ಕಡಿಮೆ ಮಾಡುತ್ತೇವೆ ಎಂದು ಲಕ್ಷ್ಮಣ ಸವದಿ ಹೇಳಿದರು.

ಗುಜರಾತ್ ಸರಕಾರ ಬೇರೆ ಬೇರೆ ವಿಧದಲ್ಲಿ ದಂಡದ ಪ್ರಮಾಣ ಕಡಿಮೆ ಮಾಡಲಾಗಿದೆ. ಅಧಿಸೂಚನೆ ಪ್ರತಿಯನ್ನು ಕಾನೂನು ಇಲಾಖೆಗೆ ಕಳುಹಿಸಿ ಕೊಟ್ಟಿದ್ದೇವೆ. ಅವರ ಅಭಿಪ್ರಾಯಪಡೆದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News