ಕೋಡಿ: ನಾಯಕತ್ವ ತರಬೇತಿ ಕಾರ್ಯಕ್ರಮ
Update: 2019-09-14 20:38 IST
ಕುಂದಾಪುರ, ಸೆ.14: ಕೋಡಿ ಬ್ಯಾರೀಸ್ ಪದವಿ ಕಾಲೇಜಿನ ವಾಣಿಜ್ಯ ಸಂಘ ಮತ್ತು ಜೇಸಿಐ ಕುಂದಾಪುರ ಸಿಟಿ ವತಿಯಿಂದ ನಾಯಕತ್ವ ತರಬೇತಿ ಕಾರ್ಯ ಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಷ್ಟ್ರೀಯ ತರಬೇತುದಾರ ವೇಣು ಗೋಪಾಲ್ ವಿದ್ಯಾರ್ಥಿಗಳಿಗೆ ನಾಯಕತ್ವದ ಬಗ್ಗೆ ತರಬೇತಿ ನೀಡಿದರು. ಜೇಸಿಐ ಕುಂದಾಪುರ ಸಿಟಿ ಇದರ ಸ್ಥಾಪಕ ಅಧ್ಯಕ್ಷ ಹುಸೇನ್ ಹೈಾಡಿ ಪ್ರಾಸ್ತಾ ವಿಕವಾಗಿ ಮಾತನಾಡಿದರು.
ವೇದಿಕೆಯಲ್ಲಿ ಜೇಸಿಐ ಕುಂದಾಪುರ ಸಿಟಿ ಇದರ ಶ್ರೀಧರ್ ಸುವರ್ಣ, ಪ್ರಶಾಂತ್ ಹವಲ್ದಾರ್, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರೆಹಮಾನ್, ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ.ಮಾಲತಿ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕ ವಿದ್ಯಾಧರ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.