ಕೋಡಿ ಬ್ಯಾರೀಸ್ ಕಾಲೇಜಿನ ಸಾಂಸ್ಕೃತಿಕ ಸಂಘ ಉದ್ಘಾಟನೆ

Update: 2019-09-14 15:09 GMT

ಕುಂದಾಪುರ, ಸೆ.14: ಕೋಡಿ ಬ್ಯಾರೀಸ್ ಪದವಿ ಕಾಲೇಜಿನ ಸಾಂಸ್ಕೃತಿಕ ಸಂಘದ ಉದ್ಘಾಟನಾ ಸಮಾಂಭವು ಸೆ.12 ರಂದು ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಯಕ್ಷಗಾನ ಭಾಗವತ ಕರುಣಾಕರ ಆಚಾರ್ಯ ಕೋಟೇಶ್ವರ ಮಾತನಾಡಿ, ಕಲಿಯುವ ಆಸಕ್ತಿ ಇದ್ದರೆ ಮಾತ್ರ ಯಾವುದೇ ಕಲೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳು ಸಾಹಿತ್ಯದ ಅಭಿರುಚಿಯನ್ನು ಬೆಳೆಸಿಕೊ ಳ್ಳಬೇಕು ಎಂದರು.

ಬ್ಯಾರೀಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರೆಹಮಾನ್ ಶುಭ ಹಾರೈಸಿದರು. ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಪ್ರೊ.ಮಾಲತಿ ಉಪಸ್ಥಿತರಿದ್ದರು.

ಸಾಂಸ್ಕೃತಿಕ ಸಂಘದ ಸಂಚಾಲಕಿ ಹರ್ಷಿತ ಜಿ.ಪಿ ಸ್ವಾಗತಿಸಿದರು. ಸಹ ಕಾರ್ಯದರ್ಶಿ ಶಕೀಲಾ ಅತಿಥಿ ಪರಿಚಯ ಮಾಡಿದರು. ಕಾರ್ಯದರ್ಶಿ ನೌಫಾಲ್ ವಂದಿಸಿದರು. ವಿದ್ಯಾರ್ಥಿನಿ ಕಾವ್ಯ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News