ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ: ಪ್ರವೇಶಾತಿಗೆ ಅವಧಿ ವಿಸ್ತರಣೆ

Update: 2019-09-14 16:31 GMT

ಬೆಂಗಳೂರು, ಸೆ.14: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2019-20ನೇ ಶೈಕ್ಷಣಿಕ ಸಾಲಿಗೆ ಯುಜಿಸಿಯ ಮಾನ್ಯತೆಯೂಂದಿಗೆ ಪ್ರವೇಶಾತಿ ದಿನಾಂಕವನ್ನು ದಂಡ ಶುಲ್ಕವಿಲ್ಲದೆ ಸೆ.30ರವರೆಗೆ ವಿಸ್ತರಿಸಲಾಗಿದೆ.

ಮುಕ್ತ ವಿಶ್ವವಿದ್ಯಾಲಯದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಾದ ಬಿಎ, ಬಿಕಾಂ., ಎಂಎ, ಎಂಸಿಜೆ, ಎಂಕಾಂ, ಬಿಎಲ್‌ಐಎಸ್ಸಿ, ಎಂಎಲ್‌ಐಎಸ್ಸಿ, ಎಂಎಸ್ಸಿ, ಪಿಜಿಡಿಪ್ಲೊಮಾ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಮಲ್ಲೇಶ್ವರಂನ ಮಹಿಳಾ ಪ್ರಾದೇಶಿಕ ಕೇಂದ್ರದಲ್ಲಿ ಮಹಿಳಾ ಮತ್ತು ಪುರುಷ ಎಲ್ಲರಿಗೂ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ.

ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ ಪ್ರವೇಶಾತಿ ಶುಲ್ಕದಲ್ಲಿ ವಿನಾಯಿತಿ ಪಡೆಯಬಹುದಾಗಿರುತ್ತದೆ ಹಾಗೂ ಬಿಪಿಎಲ್ ಕಾರ್ಡ್‌ಅನ್ನು ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ. 25ರಷ್ಟು ವಿನಾಯಿತಿ ನೀಡಲಾಗುವುದು.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲಾ ರವಿವಾರಗಳಂದು, 2ನೇ ಹಾಗೂ 4ನೇ ಶನಿವಾರ ಮತ್ತು ಸರಕಾರಿ ರಜೆ ದಿನಗಳಂದು ಸೆ.30ರವರೆಗೆ ಪ್ರಾದೇಶಿಕ ಕೇಂದ್ರಗಳಲ್ಲಿ ಶುಲ್ಕವನ್ನು ಪಾವತಿಸಿಕೊಂಡು ರಶೀತಿ ನೀಡಿ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರ್ನಾಟಕ ಮುಕ್ತ ಮಹಿಳಾ ಪ್ರಾದೇಶಿಕ ಕೇಂದ್ರ, ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, 4ನೇ ಮುಖ್ಯರಸ್ತೆ, 13ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-03. ಕಚೇರಿ ದೂ. 080-23448811, 9844506629, 9620395584, 7760848564 ಸಂಪರ್ಕಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News