ಮೂಡಬಿದಿರೆ ಆಳ್ವಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ

Update: 2019-09-14 16:36 GMT

ಉಡುಪಿ, ಸೆ.14: ಸ್ಥಳೀಯ ಪೂರ್ಣಪ್ರಜ್ಞ ಕಾಲೇಜಿನ ಹಿಂದಿ ವಿಭಾಗದ ಆಶ್ರಯದಲ್ಲಿ ಹಿಂದಿ ದಿನಾಚರಣೆಯ ಅಂಗವಾಗಿ ನಡೆದ ‘ತಾರೆ ಜುಮೀನ್ ಪರ್’ ಹಿಂದಿ ಭಾಷೆಗೆ ಸಂಬಂಧಿಸಿದ ಅಂತರ್ಕಾಲೇಜು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಮೂಬಿದಿರೆಯ ಆಳ್ವಾಸ್ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಉಡುಪಿಯ ಎಂಜಿಎಂ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆಯಿತು. ಕೆನರಾ ಹಾಗೂ ಕಾರ್ಪೊರೇಷನ್ ಬ್ಯಾಂಕಿನ ಪ್ರಾಯೋಜ ಕತ್ವದಲ್ಲಿ ನಡೆದ ಈ ಸ್ಪರ್ಧೆಗಳನ್ನು ಕಾಲೇಜಿನ ಗೌರವ ಕಾರ್ಯದರ್ಶಿ ಡಾ.ಜಿ.ಎಸ್. ಚಂದ್ರಶೇಖರ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಡಿಕೇರಿ ಜನರಲ್ ಕಾರಿಯಪ್ಪ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ ಹೆಗಡೆ ಮಾತನಾಡಿ, ಇಂಥ ಸ್ಪರ್ಧೆಗಳಿಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ ಎಂದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ರಾಘವೇಂದ್ರ ಎ. ವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಗೌರವ ಕೋಶಾಧಿಕಾರಿ ಪ್ರದೀಪ್‌ಕುಮಾರ್ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು. ಕಾರ್ಪೋ ರೇಷನ್ ಬ್ಯಾಂಕಿನ ಹಿಂದಿ ಭಾಷಾಧಿಕಾರಿ ಮೃತ್ಯುಂಜಯ ಕುಮಾರ್ ವೇದಿಕೆ ಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥ ಆನಂದ ರಾಯಮನೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಉಪನ್ಯಾಸಕಿ ಭೈರವಿ ಆರ್. ಪಂಡ್ಯ ಕಾರ್ಯಕ್ರಮ ನಿರೂಪಿಸಿದರು. ಡಾ. ಮಮತಾಶ್ರೀ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News