ರಕ್ತದಾನಕ್ಕಿಂತ ಮಿಗಿಲಾದ ಸೇವೆ ಇಲ್ಲ: ಸರಸು ಡಿ.ಬಂಗೇರ

Update: 2019-09-14 16:39 GMT

ಉದ್ಯಾವರ, ಸೆ.14: ಮಾನವನ ರಕ್ತಕ್ಕೆ ಪರ್ಯಾಯ ಬೇರೊಂದಿಲ್ಲ. ಹೀಗಾಗಿ ರಕ್ತದಾನಕ್ಕಿಂತ ಮಿಗಿಲಾದ ಸಮಾಜ ಸೇವೆ ಬೇರೆ ಯಾವುದೂ ಇಲ್ಲ ಎಂದು ಉಡುಪಿ ಜಿಪಂನ ಮಾಜಿ ಅಧ್ಯಕ್ಷೆ ಸರಸು ಡಿ.ಬಂಗೇರ ಹೇಳಿದ್ದಾರೆ.

ಉದ್ಯಾವರದ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲಿನ ಆಶ್ರಯದಲ್ಲಿ ಏಳನೇ ವರ್ಷದ ಮಂಜುನಾಥ ಉದ್ಯಾವರ ಸಂಸ್ಮರಣೆ ಅಂಗವಾಗಿ ಉಡುಪಿ ಜಿಲ್ಲಾ ಆಸ್ಪತ್ರೆಯ ಸಹಯೋಗದಲ್ಲಿ ಉದ್ಯಾವರ ಹಿಂದೂ ಶಾಲೆಯಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತಿದ್ದರು.

ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯ ಮಹಾಬಲ ಕುಂದರ್ ಮಾತನಾಡಿ, ಉದ್ಯಾವರ ಫ್ರೆಂಡ್ಸ್ ಸರ್ಕಲ್ ತಮ್ಮ ನಾಯಕ ಮಂಜುನಾಥ ಉದ್ಯಾವರ್ ಸ್ಮರಣೆಯಲ್ಲಿ ರಕ್ತದಾನ ಶಿಬಿರ, ವೈದ್ಯಕೀಯ ನೆರವು, ಸಂಸ್ಮರಣಾ ಕಾರ್ಯ ಕ್ರಮವನ್ನು ನಡೆಸುತ್ತಿರುವುದು ಸ್ಯುತ್ತರ್ಹ ಕಾರ್ಯ ಎಂದರು.

ಉಡುಪಿ ಜಿಲ್ಲಾಸ್ಪತ್ರೆಯ ರಕ್ತ ನಿಧಿಯ ವೈದ್ಯೆ ಡಾ. ವೀಣಾ ಕುಮಾರಿ ರಕ್ತದಾನದ ಮಹತ್ವ ವಿವರಿಸಿದರು. ಮುಖ್ಯ ಅತಿಥಿಗಳಾಗಿ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಗಣಪತಿ ಕಾರಂತ್, ಉದ್ಯಾವರ ಬಿಲ್ಲವ ಸಂಘದ ಅಧ್ಯಕ್ಷ ಪ್ರತಾಪ್‌ಕುಮಾರ್, ಉದ್ಯಾವರ ಗ್ರಾಪಂ ಅಧ್ಯಕ್ಷೆ ಸುಗಂಧಿ ಶೇಖರ್ ಉಪಸ್ಥಿತರಿದ್ದರು.

ಉದ್ಯಾವರ ಫ್ರೆಂಡ್ಸ್ ಸರ್ಕಲ್‌ನ ಅಧ್ಯಕ್ಷ ತಿಲಕ್‌ರಾಜ್ ಸಾಲ್ಯಾನ್ ಸ್ವಾಗತಿಸಿ, ನಿರ್ದೇಶಕ ಉದ್ಯಾವರ ನಾಗೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಪ್ರಧಾನ ಕಾರ್ಯದರ್ಶಿ ಗಿರೀಶ್ ಗುಡ್ಡೆಯಂಗಡಿ ವಂದಿಸಿ, ಮಾಜಿ ಅಧ್ಯಕ್ಷ ಆಬಿದ್ ಆಲಿ ಕಾರ್ಯಕ್ರಮ ನಿರ್ವಹಿಸಿದರು.

ಈ ಶಿಬಿರದಲ್ಲಿ ಒಟ್ಟು 86 ಯುನಿಟ್ ರಕ್ತ ಸಂಗ್ರಹವಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News