ಲಾದನ್ ಪುತ್ರ ಹಂಝ ಸಾವು ಖಚಿತ ಪಡಿಸಿದ ಟ್ರಂಪ್
Update: 2019-09-14 22:43 IST
ವಾಶಿಂಗ್ಟನ್, ಸೆ. 14: ಅಲ್-ಖಾಯ್ದಾ ಭಯೋತ್ಪಾದಕ ಸಂಘಟನೆಯ ಸ್ಥಾಪಕ ಒಸಾಮ ಬಿನ್ ಲಾದನ್‌ನ ಪುತ್ರ ಹಾಗೂ ಭಯೋತ್ಪಾದಕ ಸಂಘಟನೆಯ ಉತ್ತರಾಧಿಕಾರಿ ಹಂಝ ಬಿನ್ ಲಾದನ್, ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿಯಲ್ಲಿ ನಡೆದ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಯೊಂದರಲ್ಲಿ ಮೃತಪಟ್ಟಿದ್ದಾನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಖಚಿತಪಡಿಸಿದ್ದಾರೆ.
ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿಯಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಅಮೆರಿಕ ನಡೆಸಿದ ದಾಳಿಗಳ ಪೈಕಿ ಯಾವುದೋ ಒಂದು ದಾಳಿಯಲ್ಲಿ ಹಂಝ ಬಿನ್ ಲಾದನ್ ಮೃತಪಟ್ಟಿದ್ದಾನೆ ಎಂದು ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ ಅಮೆರಿಕದ ಮಾಧ್ಯಮಗಳು ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ವರದಿಗಳನ್ನು ಪ್ರಕಟಿಸಿದ್ದವು.