ಅನರ್ಹ ಶಾಸಕರ ಪ್ರಕರಣದ ಬಗ್ಗೆ ನಾನು ಮಾತನಾಡುವುದಿಲ್ಲ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

Update: 2019-09-14 17:37 GMT

ಮೈಸೂರು,ಸೆ.14: ಅನರ್ಹ ಶಾಸಕರ ಪ್ರಕರಣ ಸುಪ್ರೀಂಕೋರ್ಟ್‍ನಲ್ಲಿದೆ, ಹೀಗಾಗಿ ನಾನು ಏನು ಹೇಳುವುದಿಲ್ಲ. ಕೋರ್ಟ್ ತೀರ್ಪು ಬಂದ ನಂತರ ಯಾವ ರೀತಿ ಆದೇಶಿಸುತ್ತಾರೆ ಹಾಗೇ ನಡೆದುಕೊಳ್ಳಬೇಕಾಗುತ್ತದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ ತಿಳಿಸಿದರು.

ಖಾಸಗಿ ಕಾರ್ಯಕ್ರಮ ನಿಮಿತ್ತ ಶನಿವಾರ ಮೈಸೂರಿಗೆ ಆಗಮಿಸಿದ ಅವರು, ಸರಕಾರಿ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕರ್ನಾಟಕ ವಿಧಾನಸಭೆಯಲ್ಲಿ ಹೊಸತನ ತರಬೇಕು. ಹೊಸತನವನ್ನು ಪರಿಚಯಿಸಿದ ಕಾರಣಕ್ಕಾಗಿಯೇ ಡಿ.ದೇವರಾಜ ಅರಸು ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ. ಹಾಗೇ ಹೊಸ ಶಾಸಕರು, ಜನಪರವಾಗಿ ಚಿಂತನೆಯುಳ್ಳವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಅನರ್ಹ ಶಾಸಕರ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿ ಇರುವುದರಿಂದ ನಾನು ಮಾತನಾಡುವುದಿಲ್ಲ, ಅಲ್ಲಿನ ತೀರ್ಪು ಬಂದ ನಂತರ ಮಾತನಾಡುತ್ತೇನೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News