ಮಳೆಯಿಂದಾಗಿ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟ್ವೆಂಟಿ-20 ಪಂದ್ಯ ರದ್ದು

Update: 2019-09-15 14:46 GMT
Photo: AFP

ಧರ್ಮಶಾಲಾ, ಸೆ.15: ಇಲ್ಲಿ ನಡೆಯಬೇಕಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕ ತಂಡಗಳ ನಡುವಿನ ಮೊದಲ ಟ್ವೆಂಟಿ-20 ಪಂದ್ಯ ಭಾರೀ ಮಳೆಯಿಂದಾಗಿ ರದ್ದಾಗಿದೆ.

ಹಿಮಾಚಲ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು ಮಳೆ ಅವಕಾಶ ನೀಡಲಿಲ್ಲ.

ಮಳೆಯಿಂದಾಗಿ ಟಾಸ್ ನಿಧಾನವಾಗಿತ್ತು. ಸುಮಾರು ಒಂದು ಗಂಟೆ ಕಾದರೂ ಮಳೆ ನಿಲ್ಲುವ ಯಾವುದೇ ಸೂಚನೆ ಕಂಡು ಬರಲಿಲ್ಲ. ಇದರಿಂದಾಗಿ ಪಂದ್ಯವನ್ನು ರದ್ದುಪಡಿಸುವ ನಿರ್ಧಾರವನ್ನು ಅಂಪೈರ್‌ಗಳು ಕೈಗೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News