ಆಯುಷ್ಮಾನ್-ಆರೋಗ್ಯ ಕರ್ನಾಟಕ: ಜಾಥಾಕ್ಕೆ ಡಿಸಿಎಂ ಕಾರಜೋಳ ಚಾಲನೆ

Update: 2019-09-15 15:17 GMT

ಬಾಗಲಕೋಟೆ, ಸೆ. 15: ಆಯುಷ್ಮಾನ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಪಾಕ್ಷಿಕ ಅಚರಣೆ ಅಂಗವಾಗಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ರವಿವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಪ್ರತಿವರ್ಷ 5 ಲಕ್ಷ ರೂ.ವರೆಗೆ ಹಾಗೂ ಇತರೆ ಸಾಮಾನ್ಯ ವರ್ಗಗಳ ರೋಗಿಗಳಿಗೆ ಪ್ರತಿವರ್ಷ 1.5 ಲಕ್ಷ ರೂ.ವರೆಗಿನ ಚಿಕಿತ್ಸೆಯನ್ನು ಈ ಯೋಜನೆಯಡಿ ಪಡೆಯಬಹುದು. ಈ ಯೋಜನೆ ಬಗ್ಗೆ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದರು.

ಜಾಥಾದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ತಾ.ಪಂ ಅಧ್ಯಕ್ಷ ಚನ್ನನಗೌಡರ ಪರನಗೌಡರ, ಜಿಲ್ಲಾಧಿಕಾರಿ ರಾಮಚಂದ್ರನ್, ಎಸ್ಪಿ ಲೋಕೇಶ ಜಗಲಾಸರ, ಸಿಇಓ ಇಕ್ರಂ ಶರೀಪ್, ಡಿಎಚ್‌ಓ ಡಾ.ಅನಂತದೇಸಾಯಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News