ಕೇಂದ್ರ ಸರಕಾರದ ವಿರುದ್ಧ ಕಾಪು ಕಾಂಗ್ರೆಸ್ ನಿಂದ ಪ್ರತಿಭಟನೆ

Update: 2019-09-16 08:03 GMT

ಕಾಪು, ಸೆ.16: ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಸೋಮವಾರ ಪ್ರತಿಭಟನಾ ಸಭೆ ನಡೆಯಿತು.

ಪ್ರತಿಬಟನೆಗೂ ಮುನ್ನ ವಿದ್ಯಾನಿಕೇತನ್ ಶಾಲೆಯ ಬಳಿಯಿಂದ ರ್ಯಾಲಿ ನಡೆಯಿತು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೋಟಾರು ವಾಹನ ಕಾಯ್ದೆ ಜನರನ್ನು ದರೋಡೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಭೀಕರ ಮಳೆಯಿಂದಾದ ಪ್ರವಾಹಕ್ಕೆ ತುತ್ತಾಗಿ ನಿರ್ವಸಿತರಾಗಿರುವ ಜನರ ಸಂಕಷ್ಟಕ್ಕೆ ಸ್ಪಂದಿಸದಿರುವ ಮತ್ತು ಈವರೆಗೆ ಒಂದು ಬಿಡಿಗಾಸು ಪರಿಹಾರವನ್ನ ಘೋಷಿಸದೇ ಭಂಡತನ ಪ್ರದರ್ಶಿಸುತ್ತಿರುವ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರ ನೆರೆ ಸಂತ್ರಸ್ತರನ್ನು ಸಂಪೂರ್ಣ ನಿರ್ಲಕ್ಷ್ಯಿಸಿದೆ. ಉಡುಪಿ ಜಿಲ್ಲೆಯ ಮರಳು ಸಮಸ್ಯೆಯನ್ನು ಪರಿಹರಿಸಲು ಯಾವುದೇ ರೀತಿಯ ಆಸಕ್ತಿ ತೋರಿಸುತ್ತಿಲ್ಲ ಎಂದು ದೂರಿದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಗೋಪಾಲ ಪೂಜಾರಿ, ಅಶೋಕ್ ಕುಮಾರ್ ಕೊಡವೂರು, ಯು.ಆರ್.ಸಭಾಪತಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News