ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಜಾಥಾ

Update: 2019-09-16 10:50 GMT

ಬಂಟ್ವಾಳ, ಸೆ.16: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಪಾಕ್ಷಿಕ ಆಚರಣೆಯ ಪ್ರಯುಕ್ತ ಜಾಥಾ ಕಾರ್ಯಕ್ರಮವನ್ನು ಸೋಮವಾರ ಶಾಸಕ ರಾಜೇಶ್ ನಾಯ್ಕಾ ಉದ್ಘಾಟಿಸಿದರು.

ಈ ಸಂದರ್ಭ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿಯ ಅಧ್ಯಕ್ಷೆ ಧನಲಕ್ಮೀ ಸಿ. ಬಂಗೇರ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸದಾಶಿವ, ಪುರಸಭಾ ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೊ, ಪುರಸಭಾ ಅಧಿಕಾರಿಗಳು, ತಾಲೂಕು ಆಸ್ಪತ್ರೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ವಿವಿಧ ಸ್ವಸಹಾಯ ಸಂಘದ ಸದಸ್ಯರು ಪಾಲ್ಗೊಂಡಿದ್ದರು.
ಬಂಟ್ವಾಳ ಸಮುದಾಯ ಆಸ್ಪತ್ರೆಯಿಂದ ಬಿ.ಸಿ.ರೋಡಿನ ಸರ್ಕಲ್‌ವರಗೆ ಜಾಥಾ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News