ಎಸ್ಸಿಪಿ-ಟಿಎಸ್ಪಿ ಹಣ ನೆರೆ ಸಂತ್ರಸ್ತರಿಗೆ ಬಳಕೆ ನಿರ್ಧಾರ ಕೈಬಿಡದಿದ್ದರೆ ಹೋರಾಟ: ದಲಿತ ಸಂಘಟನೆಗಳ ಎಚ್ಚರಿಕೆ

Update: 2019-09-16 12:03 GMT

ಬೆಂಗಳೂರು, ಸೆ. 16: ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟಿರುವ ಎಸ್ಸಿಪಿ-ಟಿಎಸ್ಪಿ ಹಣವನ್ನು ನೆರೆ ಸಂತ್ರಸ್ತರಿಗೆ ನೀಡುವುದು ಅಕ್ಷಮ್ಯ. ದಲಿತರಿಗೆ ಮೀಸಲಿಟ್ಟ ಹಣವನ್ನು ಬೇರೆ ಕಾರಣಕ್ಕೆ ಬಳಕೆ ಮಾಡಲು ಅವಕಾಶವಿಲ್ಲ. ಆದುದರಿಂದ ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ದಲಿತ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಈ ಸಂಬಂಧ ಒಕ್ಕೂಟದ ಅಧ್ಯಕ್ಷ ವೆಂಕಟಸ್ವಾಮಿ ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದು, ವಿಶೇಷ ಘಟಕ ಯೋಜನೆಯಡಿ ಮೀಸಲಿಟ್ಟ ಶೇ.50ರಷ್ಟು ಹಣವನ್ನು ಪ್ರವಾಹ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವುದಕ್ಕೆ ವರ್ಗಾಯಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಹೇಳಿದ್ದು, ಸರಿಯಲ್ಲ ಎಂದು ಆಕ್ಷೆಪಿಸಿದ್ದಾರೆ.

2013ರ ಎಸ್ಸಿಪಿ-ಟಿಎಸ್ಪಿ ಕಾಯ್ದೆಯಲ್ಲಿ ಅನುದಾನವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಬಾರದು. ದುರುಪಯೋಗ ಮಾಡಿದರೆ ಅದು ಕಾಯ್ದೆ ಸೆಕ್ಷನ್ 24ರ ಅನ್ವಯ ಶಿಕ್ಷಾರ್ಹ ಅಪರಾಧ. ಹೀಗಾಗಿ, ಕೂಡಲೇ ಈ ನಿರ್ಧಾರವನ್ನು ಕೈಬಿಡದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News