ಕಡಬಗೆರೆ ಭೂಕಬಳಿಕೆ ವಿರೋಧಿಸಿ ಪ್ರತಿಭಟನೆ

Update: 2019-09-16 12:48 GMT

ಬೆಂಗಳೂರು, ಸೆ.16: ಬೆಂಗಳೂರು ಉತ್ತರ ತಾಲೂಕಿನ ಕಡಬಗೆರೆ ವ್ಯಾಪ್ತಿಯಲ್ಲಿ ಹತ್ತಾರು ಎಕರೆ ಭೂಮಿಯನ್ನು ಕಬಳಿಕೆ ಮಾಡಿದ್ದು, ಈ ಸಂಬಂಧ ರಾಜ್ಯ ಸರಕಾರ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

ಸೋಮವಾರ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕಡಬಗೆರೆ ಕ್ರಿಯಾ ಸಮಿತಿ ನೇತೃತ್ವದಲ್ಲಿ ಜಮಾಯಿಸಿದ ಗ್ರಾಮಸ್ಥರು, ಕಬಳಿಕೆ ಭೂಮಿಯನ್ನು ಸರಕಾರ ತೆರವು ಮಾಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಮಿತಿ ಅಧ್ಯಕ್ಷ ನರಸಿಂಹಯ್ಯ, ಕಡಬಗೆರೆ ವ್ಯಾಪ್ತಿಯಲ್ಲಿನ ಸರ್ವೆ ಸಂಖ್ಯೆ 159ರಲ್ಲಿ 17 ರಿಂದ 20 ಎಕರೆ ಗೋಮಾಳ, 10 ಎಕರೆ ಖರಾಬು ಭೂಮಿ ಸೇರಿದಂತೆ ಒಟ್ಟು 50ಕ್ಕೂ ಎಕರೆ ಭೂಮಿಯನ್ನು ಭೂಗಳ್ಳರು ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿದರು.

ಒತ್ತುವರಿ ಸಂಬಂಧಿಸಿದಂತೆ ಹಲವು ಬಾರಿ ಸ್ಥಳೀಯ ಅಧಿಕಾರಿಗಳು, ಜನ ಪ್ರತಿನಿಧಿಗಳಿಗೆ ದೂರು ನೀಡಿದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಎಚ್ಚರಿಕೆವಹಿಸಿ, ಕಾನೂನು ಕ್ರಮ ಜರುಗಿಸದೆ ಇದ್ದರೆ, ಪ್ರತಿಭಟನೆ ಮುಂದುವರೆಸಲಾಗುವುದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News