×
Ad

ಬೆಂಗಳೂರಿನಲ್ಲೇ ಚಳಿಗಾಲದ ಅಧಿವೇಶನ ?

Update: 2019-09-16 20:15 IST

ಬೆಂಗಳೂರು, ಸೆ.16: ಪ್ರವಾಹ ಹಾಗೂ ನೆರೆ ಹಾವಳಿಯಿಂದ ಹೆಚ್ಚಿನ ಪ್ರಮಾಣದಲ್ಲಿ ಬಾಧಿತವಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಪರಿಹಾರ ಹಾಗೂ ಪುನರ್ವಸತಿ ಕಾರ್ಯಗಳಿಗೆ ಯಾವುದೇ ರೀತಿಯ ತೊಂದರೆ ಆಗಬಾರದೆಂದು ಬೆಂಗಳೂರಿನಲ್ಲೇ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಅಕ್ಟೋಬರ್ 14 ರಿಂದ 25ರವರೆಗೆ ಬೆಂಗಳೂರಿನ ವಿಧಾನಸೌಧದಲ್ಲೇ ಅಧಿವೇಶನ ನಡೆಸಲು ನಿರ್ಧರಿಸಲಾಗಿದ್ದು, ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News