ವಿಶ್ವನಾಥ ಪಂಡಿತ್ ಅಪಹರಣ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2019-09-16 14:54 GMT
ಸಂದೇಶ್ ಪುತ್ರನ್

ಮಂಗಳೂರು, ಸೆ.16: ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ವಿಶ್ವನಾಥ ಪಂಡಿತ್ ಅಪಹರಣ ಪ್ರಕರಣದಲ್ಲಿ ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಮುಲ್ಕಿ ಬಪ್ಪನಾಡು ನಿವಾಸಿ ಸಂದೇಶ್ ಪುತ್ರನ್ (40) ಬಂಧಿತ ಆರೋಪಿ.

ಆತನ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ವಿಶ್ವನಾಥ ಪಂಡಿತ್ ಎಂಬವರ ಅಪಹರಣ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದವನು, ನಂತರ ವಿವಿಧ ಕಡೆ ವಾಸ್ತವ್ಯ ಬದಲಿಸುತ್ತಾ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿತ್ತು.

ಹಲವು ಪ್ರಕರಣ

ಆರೋಪಿ ವಿರುದ್ಧ ಈ ಮೊದಲು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಳ್ಳತನ, ಸುಲಿಗೆ ಹಾಗೂ ವಂಚನೆ ಪ್ರಕರಣ ದಾಖಲಿದೆ. ಸುರತ್ಕಲ್ ಹಾಗೂ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಚೆಕ್ ಬೌನ್ಸ್ ಪ್ರಕರಣಗಳು ದಾಖಲಾಗಿವೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ನಿರ್ದೇಶನದಂತೆ ಡಿಸಿಪಿಗಳಾದ ಅರುಣಾಂಕ್ಷುಗಿರಿ, ಲಕ್ಷ್ಮೀಗಣೇಶ್, ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀನಿವಾಸ್‌ ಗೌಡ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಣಂಬೂರು ಪೊಲೀಸ್ ನಿರೀಕ್ಷಕ ಅಜ್ಮತ್ ಅಲಿ, ಪಿಎಸ್ಸೈಗಳಾದ ಉಮೇಶ್‌ ಕುಮಾರ್, ವಾರಂಟ್ ಸಿಬ್ಬಂದಿ ಶೈಲೇಂದ್ರ ಕೆ. ಹಾಗೂ ಪಣಂಬೂರು ಠಾಣೆ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News