ಬ್ಯಾಂಕಿಂಗ್ ಪರೀಕ್ಷಾ ತಯಾರಿ ಉಚಿತ ತರಬೇತಿ ಕಾರ್ಯಕ್ರಮ ಉದ್ಘಾಟನೆ

Update: 2019-09-16 15:07 GMT

ಮಂಗಳೂರು, ಸೆ.16: ಮಂಗಳೂರು ವಿಶ್ವ ವಿದ್ಯಾನಿಲಯದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರದ ವತಿಯಿಂದ ಯುಜಿಸಿ-ಸಿಎಸ್‌ಐಆರ್ ನೆಟ್/ಕೆ-ಎಸ್‌ಎಲ್‌ಇಟಿ ಫಾರ್ ಜೆಆರ್‌ಎಫ್/ಅಸ್ಸಿಸ್ಟಂಟ್ ಪ್ರೊಫೆಸರ್‌ಶಿಪ್ ಮತ್ತು ಐಬಿಪಿಎಸ್/ಬ್ಯಾಂಕಿಂಗ್ ಪರೀಕ್ಷಾ ತಯಾರಿ ಉಚಿತ ತರಬೇತಿ ಕಾರ್ಯಕ್ರಮವು ಇತ್ತೀಚೆಗೆ ಕೊಣಾಜೆಯ ಮಂಗಳಗಂಗೋತ್ರಿಯಲ್ಲಿ ಉದ್ಘಾಟನೆಗೊಂಡಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿ ಎಂ.ಪಿ. ಪ್ರವೀಣ್ ಮುಂದಿನ ಮೂರು ವರ್ಷಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾವಿರಾರು ಉದ್ಯೋಗ ಅವಕಾಶಗಳಿವೆ. ಅವುಗಳ ಸಂಪೂರ್ಣ ಉಪಯೋಗ ಪಡೆದುಕೊಳ್ಳಲು ಕರೆ ನೀಡಿದರು.

ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಂಗಳೂರು ವಿವಿ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರದ ಮುಖ್ಯಸ್ಥ ಡಾ.ಎಂ ಜಯಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿಗಳಾದ ಮೇಘಾ ಎಂ. ಪ್ರಾರ್ಥಿಸಿದರು. ಡೆಂಜಿಲ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮ ಸಂಯೋಜಕ ಡಾ.ಚಂದ್ರು ಹೆಗಡೆ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News