×
Ad

ಬಾಲಕನ ಅಪರಹಣ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

Update: 2019-09-16 20:48 IST

ಪುತ್ತೂರು:  ಬಲ್ನಾಡು ಎಂಬಲ್ಲಿ ನಡೆದ ಬಾಲಕನ ಅಪರಹಣ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಸಂಪ್ಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬಂಧಿತನನ್ನು  ಕಬಕ ಗ್ರಾಮದ ವಿದ್ಯಾಪುರ ಮೂಲಕ ಮಹೇಶ್(32) ಎಂದು ಗುರುತಿಸಲಾಗಿದೆ. ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಆಂದ್ರ ಮೂಲದ ಶಿಲ್ಪಾ ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಇದೀಗ ಆಕೆಯ ಪತಿ ಎನ್ನಲಾಗಿರುವ ಮಹೇಶ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿಲ್ಪಾ ಬಾಲಕನನ್ನು ಬಲ್ನಾಡಿನ ವ್ಯಕ್ತಿಯೊಬ್ಬರ ಮನೆಯಲ್ಲಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿತ್ತು.

ಈ ಬಗ್ಗೆ ಪುತ್ತೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿನೀಡಿದ ದೂರಿನಂತೆ ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News