ವಿಜ್ಞಾನ ಮತ್ತು ತಂತ್ರಜ್ಞಾನದ ಬಳಕೆಯಿಂದ ದೇಶದ ಪ್ರಗತಿ: ಡಾ. ಬಿ.ಎನ್. ಸುರೇಶ್

Update: 2019-09-16 15:20 GMT

ಬೆಳ್ತಂಗಡಿ: ವಿಜ್ಞಾನ ಮತ್ತು ತಂತ್ರಜ್ಞಾನ ಪರಸ್ಪರ ಪೂರಕವಾಗಿದ್ದು ಇದರ ಬಳಕೆಯಿಂದ ದೇಶದ ಉತ್ತಮ ಪ್ರಗತಿ ಸಾಧ್ಯವಾಗುತ್ತದೆ ಎಂದು ಬೆಂಗಳೂರಿನ ಇಸ್ರೋ ಪ್ರಾಧ್ಯಾಪಕ ಡಾ. ಬಿ.ಎನ್. ಸುರೇಶ್ ಹೇಳಿದರು.

ಅವರು ಸೋಮವಾರ ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ನೀಡಿದರು.

ವಿಜ್ಞಾನವು ಜ್ಞಾನವನ್ನು ನೀಡಿದರೆ, ಆ ಜ್ಞಾನವನ್ನು ನಮ್ಮದೈನಂದಿನ ಜೀವನದಲ್ಲಿ ಸುತ್ತಮುತ್ತ ನಡೆಯುವ ಘಟನೆಗಳನ್ನು ಕುತೂಹಲದಿಂದ ವೀಕ್ಷಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಪ್ರಯತ್ನಿಸಬೇಕು. ಯುವಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು ವಿಜ್ಞಾನ, ತಂತ್ರಜ್ಞಾನ, ಸಂಶೋಧನೆ ಹಾಗೂ ಹೊಸ ಆವಿಷ್ಕಾರದಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು. ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ವರದಾನವಾಗಬೇಕು. ನಿತ್ಯವೂ ವಿಜ್ಞಾನಕ್ಷೇತ್ರದಲ್ಲಿ ಕ್ಷಿಪ್ರ ಬದಲಾವಣೆಗಳಾಗುತ್ತವೆ. ಕೃಷಿ ಹಾಗೂ ನೀರಿನ ಬಳಕೆ ಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ತುಂಬಾ ಉಪಯುಕ್ತವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಚಂದ್ರಯಾನದ ಬಗ್ಗೆ ವಿದ್ಯಾರ್ಥಿಗಳ ಕುತೂಹಲಕಾರಿ ಪ್ರಶ್ನೆಗಳಿಗೆ ಅವರು  ಉತ್ತರ ನೀಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಸತೀಶ್ಚಂದ್ರ ಸ್ವಾಗತಿಸಿದರು. ಪ್ರೊ.ಕುಮಾರ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News