ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ತಡೆಗೆ ಆಗ್ರಹಿಸಿ ಪ್ರತಿಭಟನೆ

Update: 2019-09-16 15:59 GMT

ಬೆಂಗಳೂರು, ಸೆ.16: ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರ ಚಟುವಟಿಕೆಗಳನ್ನು ತಡೆಯುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಸದಸ್ಯರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಸೋಮವಾರ ನಗರದ ಪುರಭವನದಿಂದ ಕೆಜಿ ರಸ್ತೆಯ ಕಂದಾಯ ಇಲಾಖೆ ಮುಂಭಾಗದವರೆಗೂ ಮೆರವಣಿಗೆ ನಡೆಸಿದ ಸದಸ್ಯರು, ಹಣ ನೀಡಿದ ವ್ಯಕ್ತಿಗಳ ಕೆಲಸ ಮಾತ್ರ ಮಾಡಲಾಗುತ್ತಿದೆ. ಇದನ್ನು ತಡೆಯಬೇಕು ಎಂದು ಹೇಳಿದರು.

ಪ್ರತಿಯೊಂದು ಕೆಲಸಕ್ಕೂ ಲಂಚ ನೀಡಬೇಕು. ಇಲ್ಲದಿದ್ದಲ್ಲಿ, ಯಾವುದೇ ಕೆಲಸಗಳು ಮುಂದೆ ಹೋಗುವುದಿಲ್ಲ. ಕೆಲವು ಆದೇಶಗಳು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಅಧಿಕಾರಿಗಳು ಮಾಡುತ್ತಿದ್ದಾರೆಂದು ಆರೋಪ ಮಾಡಿದರು.

ರೈತರಿಗೆ ಸಂಬಂಧಪಟ್ಟ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಗಳಲ್ಲಿ 10ರಿಂದ 15ರಷ್ಟು ಕಮೀಷನ್ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭೂ ಒತ್ತುವರಿ ನ್ಯಾಯ ಮಂಡಳಿಯು ಸಣ್ಣ ವಿಚಾರಕ್ಕೆ ರೈತರನ್ನು ನ್ಯಾಯಾಲಯಕ್ಕೆ ಕರೆಸಿ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದರು.

ಕೃಷಿ ತೋಟಗಾರಿಕೆ, ನೀರಾವರಿ, ಕೆಇಬಿ ಮತ್ತು ಪಂಚಾಯತ್ ಅಧಿಕಾರಿಗಳು, ಸಂಬಂಧಪಟ್ಟ ಮುಖ್ಯ ಸಿಬ್ಬಂದಿಗಳು ಒಳಗೊಂಡಂತೆ ರೈತರೊಡನೆ ಸಮಾಲೋಚನೆ ನಡೆಸಬೇಕು ಎಂದು ಒತ್ತಾಯಿಸಿ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಎನ್.ರಘು ನೇತೃತ್ವದಲ್ಲಿ ನಗರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News