ಸೆ.18ರಂದು ಸಾರ್ವಜನಿಕ ಸಮಾಲೋಚನಾ ಸಭೆ

Update: 2019-09-16 16:35 GMT

ಉಡುಪಿ, ಸೆ.16: ಅಮೃತ್, ಎ.ಡಿ.ಬಿ. ಅನುದಾನದ ನೆರವಿನಲ್ಲಿ ಕೆಐಯುಡಬ್ಲುಎಂಐಪಿ ಟ್ರಾಂಚ್-2 ಯೋಜನೆಯಡಿಯಲ್ಲಿ ದಿನದ 24 ಗಂಟೆ ಕುಡಿಯುವ ನೀರು ಒದಗಿಸುವ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಮತ್ತು ಈ ಯೋಜನೆಗಳ ಅನುಷ್ಠಾನದಿಂದಾಗುವ ಸಾಮಾಜಿಕ ಪರಿಣಾಮಗಳ ಬಗ್ಗೆ ಅಭಿಪ್ರಾಯ ಪಡೆಯುವ ಉದ್ದೇಶದಿಂದ ಸೆ.18ರಂದು ಸಂಜೆ 4 ಗಂಟೆಗೆ ಪರ್ಕಳ ವಿಘ್ನೇಶ್ವರ ಸಭಾಭವನದಲ್ಲಿ ಸೆಟ್ಟಿಬೆಟ್ಟು ಮತ್ತು ಪರ್ಕಳ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಕೆಯುಐಡಿಎಫ್‌ಸಿ ಯೋಜನಾ ಅನುಷ್ಠಾನ ಘಟಕ ಮತ್ತು ಉಡುಪಿ ನಗರಸಭೆಯ ಸಹಯೋಗದೊಂದಿಗೆ ಆಯೋಜಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News